
ಕಳೆದ 24 ಗಂಟೆಯ ಒಳಗೆ ರಾಜ್ಯದಲ್ಲಿ ದಾಖಲಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ..?
ಕೊರೋನಾ ವೈರಸ್ ತನ್ನ ರಣಕೇಕೆಯ ವೇಗವನ್ನು ಹೆಚ್ಚಿಸಿದ್ದಾರೆ, ಕೊರೋನಾ ಪ್ರಕರಣಗಳು ಪ್ರತಿನಿತ್ಯ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಲೇ ಮುಂದೆ ಸಾಗಿದೆ. ಇಡೀ ವಿಶ್ವದಾಧ್ಯಂತ ಲಕ್ಷಾಂತರ ಮಂದಿಯನ್ನು ಬಲಿತೆಗೆದುಕೊಂಡು ಮತ್ತಷ್ಟು ಬಲಿಗಾಗಿ ಹಪಹಪಿಸುತ್ತಿದೆ. ಭಾರದಲ್ಲೂ ಕೂಡ ಈಗಾಗಲೇ ಮೂರು ಲಕ್ಷವನ್ನು ಮೀರಿದೆ ಕೊರೋನಾ ಸೋಂಕಿತರ ಸಂಖ್ಯೆ,
ಇದರಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಗಣನೀಯವಾಗಿ ಏರಿಕೆಯಾಗಿದ್ದು,ಶನಿವಾರ 24 ಗಂಟೆಯಲ್ಲಿ ಬರೋಬ್ಬರಿ 308 ಕೋವಿಡ್ ಪ್ರಕರಣ ದಾಖಲಾಗುವೆ.ಜೊತೆಗೆ ಮೂವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ.
ಕೊರೋನಾಗೆ ಈ ವರೆಗೂ ಬಲಿಯಾಗಿದರ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು 14 ಜನರಿಗೆ ಕೋವಿಡ್- 19 ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಸಾವಿರದ ಗಡಿ ದಾಟಿದ ಮೊದಲ ಜಿಲ್ಲೆಯಾಗಿದೆ. ಕಳೆದ ಕೆಲ ದಿನಗಳಿಂದ ಶಾಂತವಾಗಿದ್ದ ಕಲಬುರಗಿಯಲ್ಲಿ 67 ಮತ್ತು ಯಾದಗಿರಿಯಲ್ಲಿ 52 ಪ್ರಕರಣಗಳು ಬೆಳಕಿಗೆ ಬಂದಿವೆ.
ಕಲಬುರಗಿಯಲ್ಲಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 06, ರಾಯಚೂರು, ಉತ್ತರಕನ್ನಡ ತಲಾ 5, ಕೋಲಾರ 04, ದಾವಣಗೆರೆ 03, ಮಂಡ್ಯ, ಹಾವೇರಿಯಲ್ಲಿ ತಲಾ 02,ಮೈಸೂರು, ಬಾಗಲಕೋಟೆ, ರಾಮನಗರದಲ್ಲಿ ತಲಾ 1 ಕೇಸ್ ಕಂಡು ಬಂದಿವೆ. ಬೆಳಗಾವಿಯಲ್ಲಿ ಯಾವುದೇ ಕೊರೊನಾ ಕೇಸ್ ಕಾಣಿಸಿಕೊಂಡಿಲ್ಲ.
ಧಾರವಾಡ ಜಿಲ್ಲೆಯ 70 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಜೂನ್ 9ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 12ರಂದು ನಿಧನ ಹೊಂದಿದ್ದಾರೆ. ಬೆಂಗಳೂರಿನ 23 ವರ್ಷದ ಯುವಕ ಮಧುಮೇಹ ಮತ್ತು ಜ್ವರ ಕಾಣಿಸಿಕೊಂಡಿದ್ದರಿಂದ ಜೂನ್ 9ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 12ರಂದು ನಿಧನರಾಗಿದ್ದಾರೆ.
ಬೆಂಗಳೂರಿನ 62 ವರ್ಷದ ಪುರುಷ ಅಸ್ತಮಾದಿಂದ ಬಳಲುತ್ತಿದ್ದರು. ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಮಾಹಿತಿ ಪ್ರಕಾರ, ಇಂದು ಕಂಡು ಬಂದ 308 ಸೋಂಕಿತರ ಪೈಕಿ 208 ಜನರು ಅಂತರಾಜ್ಯ ಮತ್ತು 25 ಜನರು ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯನ್ನು ಹೊಂದಿದ್ದಾರೆ.
ರಾಜ್ಯದಲ್ಲಿ ಸದ್ಯ,3,029 ಸಕ್ರಿಯ ಪ್ರಕರಣಗಳಿವೆ. ಜತೆಗೆ 3,648 ಜನರು ಇಲ್ಲಿಯವರೆಗೆ ಗುಣಮುಖರಾಗಿದ್ದು, ಇಂದು 209 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜತೆಗೆ ಇಲ್ಲಿಯವರೆಗೆ 81 ಜನರು ಸಾವನ್ನಪ್ಪಿದ್ದಾರೆ.