ಕೊರೋನಾ ವೈರಸ್, ಕೆಮ್ಮು ನೆಗಡಿಯಂತೆ ಸಾಮಾನ್ಯವಾಗುತ್ತದಂತೆ..!! ತಜ್ಞರೊಬ್ಬರ ಭರವಸೆ

Soma shekhar

ಇಡೀ ವಿಶ್ವದೆಲ್ಲೆಡೆ  ಜನರನ್ನು ಬಲಿತೆಗೆದುಕೊಳ್ಳುತ್ತಿರುವ  ಕೊರೋನಾ ವೈರಸ್ ನನ್ನು ತಡೆಯು ಸರ್ಕಾರಗಳು ನಾನಾ ರೀತಿಯಾದ ಕ್ರಮಗಳನ್ನು ಗೈಗೊಳ್ಳಲಾಗಿದೆ. ಈ ಕ್ರಮಗಳಲ್ಲಿ ಮೊದಲನೇ ಸ್ಥಾನದಲ್ಲಿ ನಿಲ್ಲುವ ಕ್ರಮವೆಂದರೆ ಅದು ಪ್ರತಿಯೊಬ್ಬರೂ ಕೂಡ ಮಾಸ್ಕ್ ಅನ್ನು ಧರಿಸುವುದು. ಇಲ್ಲದಿದ್ದರೆ ಸರ್ಕಾರ ನಿಗಧಿ ಪಡಸಿದ ದಂಡವನ್ನು ವಿಧಿಸಲಾಗುತ್ತದೆ. ಆದರೆ ಮಧ್ಯ ಪ್ರದೇಶದಲ್ಲಿ ಮಾತ್ರ ಮಾಸ್ಕ್ ಧರಿಸದಿದ್ದರೆ ವಿನೂತನವಾದ ಶಿಕ್ಷೆಯನ್ನು ವಿಧಿಸಲಾಗುತ್ತಿದೆ. ಅಷ್ಟಕ್ಕೂ ಮಧ್ಯ ಪ್ರದೇಶ ಸರ್ಕಾರ ನೀಡುತ್ತಿರುವ ಆ ವಿನೂತನ ಶಿಕ್ಷೆ ಯಾವುದು ಗೊತ್ತಾ..?

 

ನೀವು ಮಾಸ್ಕ್ ಧಿರಿಸಿಲ್ಲವಾ ಹಾಗಾದರೆ ಕೊರೊನಾ ಸೋಂಕಿತರ ಸೇವೆ ಮಾಡಲು ಸಿದ್ಧರಾಗಿ. ಇದು ಗ್ವಾಲಿಯರ್‌ನಲ್ಲಿ ಮಾಸ್ಕ್ ಧರಿಸದವರ ವಿರುದ್ಧ ತೆಗೆದುಕೊಂಡ ಕ್ರಮವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೊವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.

 

ಕೊರೊನಾ ಸಾಂಕ್ರಾಮಿಕ ಸಂಕಷ್ಟದಲ್ಲಿರುವ ಭಾರತದಲ್ಲಿ ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೂ ಸಾರ್ವಜನಿಕರ ಬೆಂಬಲವಿಲ್ಲದೇ ಭಾರತ ಕೊರೋನಾ ವಿರುದ್ಧದ ಹೋರಾಟದಲ್ಲಿ ಹಿಂದೆ ಬೀಳುತ್ತಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿದಂತೆ ಸಾಕಷ್ಟು ವಿಚಾರಗಳನ್ನು ಜನ ಮರೆಯುತ್ತಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರದೇಶದಲ್ಲಿ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹ ವ್ಯಕ್ತಿಗಳನ್ನು ಆಸ್ಪತ್ರೆಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುವ ಶಿಕ್ಷೆ ವಿಧಿಸುತ್ತಿದೆ.

 

ಕೇವಲ ಆಸ್ಪತ್ರೆ ಮಾತ್ರವಲ್ಲದೇ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿಯೂ ಇವರನ್ನು ಸ್ವಯಂಸೇವಕರಾಗಿ ಕೆಲಸ ಮಾಡಲು ನಿಯೋಜಿಸಲಾಗುತ್ತಿದ್ದು, ಇದರ ಜೊತೆಗೆ ದಂಡ ಕೂಡ ಹಾಕಲಾಗುತ್ತಿದೆ. ಅದರ ಮೊದಲ ಭಾಗವಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹವರನ್ನು ಕನಿಷ್ಟ 3 ದಿನಗಳ ಕಾಲ ಆಸ್ಪತ್ರೆಗಳಲ್ಲಿ , ಫೀವರ್ ಕ್ಲಿನಿಕ್ ಗಳಲ್ಲಿ ಮತ್ತು ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.

 

ಇದರ ಜೊತೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ. ಇದೇ ವೇಳೆ ಇಂದೋರ್, ಭೋಪಾಲ್, ಮತ್ತು ಇತರೆ ರಾಜ್ಯಗಳಿಂದ ಗ್ವಾಲಿಯರ್ ಗೆ ಆಗಮಿಸುವವರನ್ನು ಗಡಿಯಲ್ಲೇ ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಗ್ವಾಲಿಯರ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು, ಕೊರೋನಾ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಜನರಿಂದ ಮಾರ್ಗದರ್ಶಿ ಸೂತ್ರಗಳ ಪಾಲನೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

 

Find Out More:

Related Articles: