ಕಪಟ ನಾಟಕ ಪಾತ್ರಧಾರಿಯ ಹಾರರ್ ಟೀಸರ್ ಬಿಡುಗಡೆ, ರೆಸ್ಪಾನ್ಸ್ ಹೇಗಿದೆ ಗೊತ್ತಾ!?

frame ಕಪಟ ನಾಟಕ ಪಾತ್ರಧಾರಿಯ ಹಾರರ್ ಟೀಸರ್ ಬಿಡುಗಡೆ, ರೆಸ್ಪಾನ್ಸ್ ಹೇಗಿದೆ ಗೊತ್ತಾ!?

somashekhar

ಬೆಂಗಳೂರು: ಹಾರಾರ್ ಅಂದ್ರೇನೆ ಅಲ್ಲೇನೋ ಸ್ಪೆಶಲ್, ಡಿಫರೆಂಟ್, ಭಯಾನಕ ದೃಶ್ಯ ಗಳಿರುತ್ತವೆ. ಎದೆಯಲ್ಲಿ ನಡುಕವನ್ನು ಹುಟ್ಟಿಸುತ್ತವೆ. ಕನ್ನಡ ಚಿತ್ರರಂಗ ದಲ್ಲಿ ಹಾರಾರ್ ಚಿತ್ರಗಳು ಬರುವುದೇ ಕಡಿಮೆ, ಆದರೆ 'ಕಪಟ ನಾಟಕ ಪಾತ್ರದಾರಿ' ಎನ್ನುವ ಹಾರಾರ್ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇದೀಗ ತಾನೇ ಟೀಸರ್ ಬಿಡುಗಡೆಯಾಗಿದ್ದು, ಭಯಾನಕ ದೃಶ್ಯ ಗಳೊಂದಿಗೆ ಸಿಕ್ಕಾಪಟ್ಟೆ ಕುತೂಹಲಕಾರಿ ಯಾಗಿದೆ. 
ಬಾಲು ನಾಗೇಂದ್ರರಂಥಾ ವಿಶಿಷ್ಟ ನಟ ಪ್ರಧಾನ ಪಾತ್ರವನ್ನು ಹೊಂದಿರುವ ಈ ಚಿತ್ರ ಇದೇ ನವೆಂಬರ್ 8ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈ ಕಡೆಯ ಹೊತ್ತಿನಲ್ಲಿ ಈ ಥರದ ಗಾಢವಾದ ನಿರೀಕ್ಷೆ, ಕುತೂಹಲ, ಕ್ರೇಜ್‌ಗಳು ಮೇಳೈಸಿವೆಯಲ್ಲಾ? ಇದೆಲ್ಲವನ್ನೂ ಮೀರಿಸುವ ಹೂರಣ ಈ ಸಿನಿಮಾದೊಳಗಿದೆ.
ಡ್ರೈವರ್ ದಿನಚರಿಯನ್ನೊಳಗೊಂಡಿರುವಂಥಾದ್ದು. ಆದರೆ ನಿರ್ದೇಶಕ ಕ್ರಿಶ್ ಈ ದಿನಚರಿಯ ಪರಿಧಿಯೊಳಗೆ ಇಡೀ ಬ್ರಹ್ಮಾಂಡವನ್ನೇ ತಂದು ನಿಲ್ಲಿಸಿದ್ದಾರೆ. ಇದರಲ್ಲಿರೋದು ಆಟೋ ಡ್ರೈವರನ ದಿನಚರಿಯೆಂಬಂತೆ ಸಿಂಪಲ್ ಕಥೆಯ ಸುಳಿವು ಕೊಟ್ಟಿದ್ದ ಚಿತ್ರತಂಡ ಟ್ರೇಲರ್ ಮೂಲಕ ಅಚ್ಚರಿಗೆ ಕಾರಣವಾಗಿತ್ತು. ಏಕೆಂದರೆ ಅದರಾಚೆಗೆ ಅಲ್ಲಿ ಅನೇಕ ಕೊಂಬೆ ಕೋವೆ, ಸಸ್ಪೆನ್ಸ್ ಥ್ರಿಲ್ಲರ್ ಅನುಭವವಾಗಿತ್ತು. ಇದೆಲ್ಲವನ್ನೂ ಮೀರಿದ ಬಿರುಸಿನ ಕಥೆ ಇಲ್ಲಿದೆ ಎಂಬ ಸ್ಪಷ್ಟ ಸೂಚನೆಯೂ ಸಿಕ್ಕಿತ್ತು.
ಇದೆಲ್ಲವನ್ನು ಹೊರತು ಪಡಿಸಿ ಚಿತ್ರತಂಡ ಕೊಂಚ ಸಸ್ಪೆನ್ಸ್ ಆಗಿಟ್ಟು, ಅಷ್ಟಾಗಿ ಎಲ್ಲಿಯೂ ಹೇಳಿಕೊಳ್ಳದ ಮತ್ತೊಂದು ಅಂಶವೂ ಈ ಚಿತ್ರದಲ್ಲಿದೆ. ಅದು ಹಾರರ್ ಶೇಡ್. ಇದು ಪ್ರತಿ ಪ್ರೇಕ್ಷಕರನ್ನೂ ಕೂಡಾ ಸುಳಿವೇ ಕೊಡದೆ ಬೆಚ್ಚಿ ಬೀಳಿಸಲಿದೆಯಂತೆ. ಇಡೀ ಕಥೆ ಗಂಭೀರವಾಗಿ, ಹಾಸ್ಯಮಯವಾಗಿ, ಉಸಿರು ಬಿಗಿ ಹಿಡಿದು ನೋಡುವಂಥಾ ಆವೇಗದೊಂದಿಗೆ ಸಾಗುತ್ತಿರುವಾಗಲೇ ಇಲ್ಲಿ ಏಕಾಏಕಿ ಹಾರರ್ ಅಂಶಗಳು ಪ್ರತ್ಯಕ್ಷವಾಗಲಿವೆಯಂತೆ. ಹಾಗೆ ಹಾರರ್ ಶೇಡ್ ತೆರೆದುಕೊಳ್ಳಲು ಕಾರಣವೇನು? ಅದರ ತೀವ್ರತೆ ಏನು ಎಂಬುದಕ್ಕೆಲ್ಲ ಇದೇ ನವೆಂಬರ್ ಎಂಟರಂದು ನಿಖರ ಉತ್ತರ ಸಿಗಲಿದೆ. ಈಗಾಗಲೇ ಸಾಕಷ್ಟು ನಿರೀಕ್ಷಗಳು, ಮತ್ತು ಪ್ರಶ್ನೆಗಳನ್ನು ಹುಟ್ಟು ಹಾಕಿರುವ ಈ ಚಿತ್ರಕ್ಕಾಗಿ ಹಾರಾರ್ ಪ್ರಿಯರು ಒಂಟಿ ಕಾಲಿನ ಮೇಲೆ ನಿಂತು ಕಾಯುತ್ತಿರುವುದು ವಿಶೇಷವೆ ಸರಿ.


Find Out More:

Related Articles:

Unable to Load More