ಲಾಕ್ ಡೌನ್ ವದಂತಿಗೆ ಸಿಎಂ ಯಡಿಯೂರಪ್ಪ ನೀಡಿದ ಸ್ಪಷ್ಟನೆ ಏನು ಗೊತ್ತಾ?

Soma shekhar

ಕೊರೋನಾ ವೈರಸ್ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಲೇ, ಇದರ ಜೊತೆಗೆ ರಾಜ್ಯ ರಾಜಧಾನಿಯಲ್ಲೂ ಕೂಡ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದ ಬೆಂಗಳೂರಿನ ಜನರಿಗೆ ಕೊರೋನಾ ಕಂಟಕ ವಾಗಿ ಪರಿಣಮಿಸಿದೆ. ಈ ಕೊರೋನಾ ವನ್ನು ತಡೆಯ ಬೇಕೆಂದರೆ ಬೆಂಗಳೂರನ್ನು ಲಾಕ್ ಡೌನ್ ಮಾಡಬೇಕು ಎಂದು ಹಲವು ತಜ್ಞರು ಸಲಹೆಯನ್ನುನೀಡಿದ್ದರು. ಆದರೆ ಕೆಲವು ಸಚಿವರು ಲಾಕ್ ಡೌನ್ ಮಾಡುವುದಕ್ಕೆ ವಿರೋಧವನ್ನೂ ವ್ಯಕ್ತ ಪಡಿಸಿದ್ದರು. ಈ ಕುರಿತು ಮುಖ್ಯ ಮಂತ್ರಿ ಯಡಿಯೂರಪ್ಪನವರು ಸ್ವಷ್ಟ ಹೇಳಿಕೆಯನ್ನು ನೀಡಿದ್ದಾರೆ. ಅಷ್ಟಕ್ಕೂ ಯಡಿಯೂರಪ್ಪನವರು ನೀಡಿದ ಆ ಸ್ಪಷ್ಟನೆ ಏನು ಗೊತ್ತಾ..?

 

ರಾಜಧಾನಿ ಬೆಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸದ್ಯದ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಕೋವಿಡ್-19 ಸೋಂಕು ಹಾಗೂ ಸಾವಿನ ಪ್ರಕರಣಗಳು ಏರಿಕೆಯಾಗುತ್ತಿದ್ದರಿಂದ ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಆಗಬಹುದು ಎಂಬ ಊಹಾಪೋಹಗಳು ಕೇಳಿಬಂದಿದ್ದವು.

 

ಇಂದು ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕಡ್ಡಿ ಮುರಿದಂತೆ ನುಡಿದರು. ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬುವುದನ್ನು ತಡೆಗಟ್ಟಲು ಕೇವಲ ಸರ್ಕಾರದಿಂದಲೇ ಸಾಧ್ಯವಿಲ್ಲ. ಸಾರ್ವಜನಿಕರು ಇದಕ್ಕೆ ಕೈ ಜೋಡಿಸಬೇಕು. ನಿಮ್ಮ ಸಹಕಾರವಿಲ್ಲದೆ ಯಾವುದೂ ಕೂಡ ಯಶಸ್ವಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.

 

ದೇಶದ ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರು ಕೊರೊನಾ ನಿಯಂತ್ರಿಸುವುದರಲ್ಲಿ ಇತರೆ ರಾಜ್ಯಗಳಿಗೂ ಮಾದರಿಯಾಗಿತ್ತು. ಕಳೆದ ಕೆಲವು ದಿನಗಳಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಅನಗತ್ಯವಾಗಿ ತಿರುಗಾಡುವುದನ್ನು ನಿಲ್ಲಿಸಬೇಕು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಜನತೆಯಲ್ಲಿ ಸಿಎಂ ಮನವಿ ಮಾಡಿದರು.

 

ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದರೂ ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ವೈರಸ್ ತಡೆಯಲು ನಾವು ಎಲ್ಲ ರೀತಿಯ ಸರ್ವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

 

ಇಂದು ಸರ್ವಪಕ್ಷಗಳ ಶಾಸಕರ ಸಭೆ ನಡೆಯಲಿದೆ. ಅಲ್ಲಿ ವ್ಯಕ್ತವಾಗುವ ಅಭಿಪ್ರಾಯವನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಲಿದೆ. ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ ಶಾಸಕರು ಕೊರೊನಾ ತಡೆಯಲು ಮುಂದಾಗಬೇಕು. ಸಾರ್ವಜನಿಕರೊಂದಿಗೆ ನೀವು ಕೂಡ ಕೈ ಜೋಡಿಸಿ ಇದನ್ನು ತಡೆಗಟ್ಟಲು ಜನಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

 

ಕಳೆದ ಹತ್ತು ದಿನಗಳಿಂದ ಬೆಂಗಳೂರು, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಸೇರಿದಂತೆ ಮತ್ತಿತರ ಕಡೆ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರಿಂದ ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಜಾರಿಯಾಗಲಿದೆ ಎಂಬ ಪುಕಾರುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದವು.

 

Find Out More:

Related Articles: