ಬೆಂಗಳೂರೂರನ್ನು ಬಿಟ್ಟು ಹೋಗುತ್ತಿರುವ ಕಾರ್ಮಿಕರಿಗೆ ಮುಖ್ಯಮಂತ್ರಿ ಏನು ಹೇಳಿದ್ದಾರೆ ಗೊತ್ತಾ..?

Soma shekhar

ಕೊರೋನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಕೊರೋನಾ ರಣಕೇಕೆಯನ್ನು ಶುರು ಮಾಡಿದೆ. ಇದರಿಂದ ಬೆಂಗಳೂರಿನಲ್ಲಿ ನಿರ್ಭಯವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬಹಳ ಕಷ್ಟವಾಗಿದೆ ಇದರಿಂದ ಬೆಂಗಳೂರಿನಲ್ಲಿ ಸಣ್ಣ ಪುಟ್ಟ ಕೆಲಸ ಕಾರ್ಯಗಳನ್ನು ಮಾಡುತ್ತಾ ಜೀವನವನ್ನು ನಡೆಸುತ್ತಿದ್ದ ಅನೇಕ ಮಂದಿ ಕೆಲಸವನ್ನು ಕಳೆದು ಕೊಂಡು ನಿರ್ಗತಿಕರಾಗಿದ್ದಾರೆ. ಇದರ ಜೊತೆಗೆ  ಬೆಂಗಳೂರನ್ನು ಲಾಕ್ ಡೌನ್ ಮಾಡಲಾಗುತ್ತದೆ ಎಂಬ ವದಂತಿಗೆ ಹೆದರಿ ಅನೇಕ ಮಂದಿ ಕಾರ್ಮಿಕರು ಬೆಂಗಳೂರನ್ನು ಬಿಟ್ಟು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏನು ಹೇಳಿದ್ದಾರೆ ಗೊತ್ತಾ.?

 

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪುನಃ ಲಾಕ್‍ಡೌನ್ ಜಾರಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಜನರು ಬೆಂಗಳೂರು ಬಿಟ್ಟು ಹೋಗದಂತೆ ಮನವಿ ಮಾಡಿದ್ದಾರೆ. ಕೊರೊನಾ ಜೊತೆ ಬದುಕಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರದ ಮುಂದೆ ಲಾಕ್‍ಡೌನ್ ಮಾಡುವ ಆಲೋಚನೆ ಇಲ್ಲ ಎಂದು ಅವರು ಪುನರುಚ್ಚರಿಸಿದರು.

 

ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನು ರಾಜ್ಯದ ಜನತೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಮನವಿ ಮಾಡಿಕೊಳ್ಳುವುದೇನೆಂದರೆ ಲಾಕ್‍ಡೌನ್ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿ ಅಷ್ಟೇ. ಇಂತಹ ಊಹಪೋಹಗಳಿಗೆ ಯಾರೊಬ್ಬರು ಕಿವಿಗೊಡಬಾರದು ಎಂದು ಹೇಳಿದರು.

ರಾಜ್ಯ ಸರ್ಕಾರ ಎಲ್ಲಿಯೂ ಕೊರೊನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಏನೇನು ಕ್ರಮಗಳನ್ನು ಕೈಗೊಳ್ಳಬೇಕಿತ್ತೊ ಎಲ್ಲವನ್ನೂ ತೆಗೆದುಕೊಂಡಿದ್ದೇವೆ. ಸಾರ್ವಜನಿಕರು ಸರ್ಕಾರದ ಜೊತೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

 

ಬೆಂಗಳೂರಿನಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ, 450 ಆಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಸೋಂಕಿನ ಪ್ರಕರಣಗಳು ಹೆಚ್ಚಾದ ತಕ್ಷಣ ಜನತೆ ಗಾಬರಿಯಾಗುವುದು ಬೇಡ. ಜನರ ಜೀವನ ಬಹುಮುಖ್ಯವಾಗಿರುವುದರಿಂದ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಸಾರ್ವಜನಿಕರು ಅಂತರ ಕಾಪಾಡಿಕೊಂಡು ಕೋವಿಡ್ ಜೊತೆಗೆ ಬದುಕುವುದು ಅನಿವಾರ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.

 

Find Out More:

Related Articles: