ಇಂದು ರಾಜ್ಯ ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕಗಳೇನು ಗೊತ್ತಾ?

Soma shekhar
ರಾಜ್ಯ ಸರ್ಕಾರ ಇಂದು ವಿಧಾನ ಸಭೆಯಲ್ಲಿ ಹಲವು ವಿಷಯಗಳ ಕುರಿತಾಗಿ ಕೆಲವು ವಿಧೇಯಕಗಳನ್ನು ಮಂಡನೆಮಾಡಲಾಯಿತು ಅದರಲ್ಲಿ ಪ್ರಮುಖವಾಗಿ ಕರ್ನಾಟಕ ಲೋಕಾಯುಕ್ತವನ್ನು ಮತ್ತೆ ಜಾರಿಗೆ ತರುವುದು ಹಾಗೂ ಭೂಸುಧಾರಣೆ  ಸೇರಿದಂತೆ ಹಲವು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.

ಹೌದು 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ)ವಿಧೇಯಕ , ವಿವಾದಿತ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಸೇರಿದಂತೆ 12 ವಿಧೇಯಕಗಳು ವಿಧಾನಸಭೆಯಲ್ಲಿ ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತ ಮೂಲಕ ಪ್ರಾರಂಭಿಕ ವಿಚಾರಣೆ ಮತ್ತು ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆವರದಿಗಳನ್ನು ಸಲ್ಲಿಸಲು ಕುಂದು ಕೊರತೆಗಳು ಅಥವಾ ದೂರುಗಳ ಶೀಘ್ರ ವಿಲೇವಾರಿಗಾಗಿ ಕರ್ನಾಟಕ ಲೋಕಾಯುಕ್ತವನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಸಾಧ್ಯವಾಗಿಸಲು ಸಮಯದ ಚೌಕಟ್ಟನ್ನು ಅಳವಡಿಸಲು ವಿಧೇಯಕದಲ್ಲಿ ತಿದ್ದುಪಡಿ ಪ್ರಸ್ತಾಪ ಮಾಡಲಾಗಿದೆ.


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಈ ವಿಧೇಯಕವು ಮಾಸ್ಟ್‍ರ್ ಪ್ಲಾನ್‍ಗಳನ್ನು ಸಿದ್ದಪಡಿಸುವುದರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಭಾಗವಹಿಸುವಿಕೆಯನ್ನು ಖಚಿತ ಪಡಿಸಿಕೊಳ್ಳಲು ಹಾಗೂ ವಾರ್ಡ್ ಮಟ್ಟದಲ್ಲಿ ಭೂ ಕಬಳಿಕೆ ನಕಾಶೆಗಳನ್ನು ಸಿದ್ದಪಡಿಸಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅಧಿನಿಯಮ 1961ಅನ್ನು ತಿದ್ದುಪಡಿ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕವು ರಾಜ್ಯ ಸಿವಿಲ್ ಸೇವೆಗಳಿಗೆ ಸಾರ್ವಜನಿಕ ವಲಯದ ಉದ್ಯಮಗಳ ನೌಕರರ ವಿಲೀನವನ್ನು ತಡೆಯುವುದಕ್ಕಾಗಿ ತಿದ್ದುಪಡಿ ತರುವುದು ಅವಶ್ಯಕವೆಂದು ಪರಿಗಣಿಸುವ ಪ್ರಸ್ತಾಪ ಮಾಡಲಾಗಿದೆ.


ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಂಡಿಸಿದ 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕವು ಕುಷ್ಠರೋಗ ಬಾಧಿತ ವ್ಯಕ್ತಿಗಳ ಸಂಬಂಧದಲ್ಲಿನ ತಾರತಮ್ಯಕಾರಕವಾದ ಉಪಬಂಧವನ್ನು ತೆಗೆದು ಹಾಕುವ ಪ್ರಸ್ತಾಪ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ  ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದ 2020ನೇ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರೆ ಕೆಲವು ಕಾನೂನುಗಳ ತಿದ್ದುಪಡಿ ವಿಧೇಯಕವು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಅಧಿನಿಯಮ 2009 ಹಾಗೂ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯ ಅಧಿನಿಯಮ 2009ಕ್ಕೆ ತಿದ್ದುಪಡಿ ತರುವ ಪ್ರಸ್ತಾವವನ್ನು ಮಾಡಲಾಗಿದೆ.

ಇಂತಹ ಸನ್ನಿವೇಶನವನ್ನು ನಿಭಾಯಿಸಲು ಮುಖ್ಯಮಂತ್ರಿಗಳು, ಮಂತ್ರಿ, ರಾಜ್ಯ ಮಂತ್ರಿ, ಉಪ ಮಂತ್ರಿ, ಸಭಾಪತಿ, ಉಪ ಸಭಾತಿ, ಸಭಾಧ್ಯಕ್ಷ, ಉಪ ಸಭಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಸರ್ಕಾರದ ಮುಖ್ಯ ಸಚೇತಕ, ವಿರೋಧ ಪಕ್ಷದ ಮುಖ್ಯ ಸಚೇತಕ, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸಂಬಳ ಮತ್ತು ಭತ್ಯೆಯನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲವನ್ನು ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ.ಕಂದಾಯ ಸಚಿವ ಆರ್.ಅಶೋಕ್ ಮಂಡಿಸಿದ 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ( ಎರಡನೇ ತಿದ್ದುಪಡಿ) ವಿಧೇಯಕವು 1961 ರ (ಅಧಿನಿಯಮ (10) 79ಎ, 79ಬಿ, 79 ಸಿ ಪ್ರಕರಣಗಳನ್ನು ಬಿಟ್ಟುಬಿಡುವ ಪ್ರಸ್ತಾಪ ಮಾಡಲಾಗಿದೆ. ಎ ವರ್ಗದ ನೀರಾವರಿ ಭೂಮಿಯು ಕೃಷಿ ಉದ್ದೇಶಕ್ಕೆ ಮಾತ್ರ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


Find Out More:

Related Articles: