ಕೃಷಿ ಮಸೂದೆಯನ್ನು ವಿರೋಧಿಸಿ ಕರ್ನಾಟಕ ಬಂದ್..!!

Soma shekhar
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೇಶದೆಲ್ಲಡೆ ಹೋರಾಟಗಳು ಆರಂಭವಾಗಿದೆ. ಅದರಂತೆ ಇಂದು ಕರ್ನಾಟಕದಲ್ಲಿ ಈ ಮಸೂದೆಯನ್ನು ವಿರೋಧಿಸಿ ಇಡೀ ರಾಜ್ಯವನ್ನೇ ಬಂದ್  ಮಾಡಿ ರಾಜ್ಯದ ಎಲ್ಲಾ ಭಾಗದಲ್ಲೂ ಕೂಡ ಪ್ರತಿಭಟನೆ ಹೋರಾಟಗಳು ತೀವ್ರಗೊಂಡಿದೆ.

ಹೌದು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಇಂದು ರೈತ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಕೆಲವು ಸೇವೆಗಳು ಅಸ್ತವ್ಯಸ್ತವಾಗಿವೆ. ಬಂದ್‌ಗೆ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಅಗತ್ಯ ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್ ಆಗಿದ್ದು, ಬೆಳಿಗ್ಗೆಯಿಂದಲೇ ರಾಜ್ಯದಾದ್ಯಂತ ಪ್ರತಿಭಟನೆಗಳು ಆರಂಭವಾಗಿವೆ.

ಹಾಲು, ತರಕಾರಿ ಹಾಗೂ ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಔಷಧ ಅಂಗಡಿಗಳು,ಹೋಟೆಲ್‌ಗಳು, ಎಂದಿನಂತೆ ತೆರೆದಿವೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸೇವೆ ಬಗ್ಗೆ ಗೊಂದಲಗಳಿದ್ದು ಬೆರಳೆಣಿಕೆ ಸಂಖ್ಯೆಯ ಬಸ್ ಗಳು ಮಾತ್ರ ಸಂಚಾರ ಆರಂಭಿಸಿವೆ. ಆದರೆ, ಈ ನಿಗಮಗಳ ನೌಕರರ ಸಂಘ ಬಂದ್ ಬೆಂಬಲ ವ್ಯಕ್ತಪಡಿಸಿರುವುದರಿಂದ ವ್ಯತ್ಯಯವಾಗುವ ಸಾಧ್ಯತೆ ಇದೆ. ಆಟೊ-ಟ್ಯಾಕ್ಸಿ ಸೇವೆ ಇರುವುದಿಲ್ಲ.
ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು. ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಕರ್ನಾಟಕ ಬಂದ್‌ಗೆ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ 32ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ.

ಲಾರಿ ಮಾಲಿಕರ ಸಂಘ, ಆಟೋ ಸಂಘ, ಕನ್ನಡ ಪರ ಸಂಘಟನೆಗಳ ಸಾಥ್ ನೀಡಿವೆ. ರೈತ ಸಂಘ, ಹಸಿರು ಸೇನೆ, ದಲಿತ ಸಂಘಟನೆಗಳು, ಓಲಾ-ಉಬರ್ ಚಾಲಕರ ಸಂಘಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ಇದರ ಜೊತೆಗೆ ಸಿಐಟಿಯು ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿದೆ. ರೈತರ ಹೋರಾಟಕ್ಕೆ ಬೀದಿ ಬದಿ ವ್ಯಾಪಾರಿಗಳು ಸಂಪೂರ್ಣ ಬೆಂಬಲ ನೀಡಿದ್ದಾರೆ.ಇನ್ನು ಪೆಟ್ರೋಲ್- ಡಿಸೇಲ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘದಿಂದ, ಬಾರ್ ಮಾಲೀಕರ ಅಸೋಸಿಯೇಷನ್‌, ಖಾಸಗಿ ಬಸ್‌ಗಳ ಒಕ್ಕೂಟದಿಂದ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಂಘ, ಮಾಲ್ ಅಸೋಸಿಯೇಷನ್‌ನ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ.

Find Out More:

Related Articles: