ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪ ಹೇಳಿದ್ದೇನು..?

Soma shekhar
ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯನ್ನು ಮಾಡಲು ಮುಖ್ಯ ಮಂತ್ರ ನಿರ್ಧರಿಸಿದ್ದು ಅದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಒಮ್ಮೆ ದೆಹಲಿಗೆ ಹೋಗಿ ಹೈಕಮಾಂಡ್ ನೊಂದಿಗೆ ಮಾತಾಡಿ ಬರಿಗಯ್ಯಲ್ಲಿ ವಾಪಾಸಾಗಿರುವ  ಮುಖ್ಯಮಂತ್ರಿ ಯಡಿಯೂರಪ್ಪನವರು  ಈಗ ಮತ್ತೊಮ್ಮೆ ದೆಹಲಿಗೆ ಹೋಗಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.




ಹೌದು ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ  ಮಾಡಲಾಗಿದೆ. ಸಂಪುಟ ವಿಸ್ತರಣೆಗೆ ಇದ್ದ ಅಡೆತಡೆ, ಅಡ್ಡಿ ಆತಂಕಗಳು ಎಲ್ಲವೂ ನಿವಾರಣೆಯಾಗಿದೆ. ಸಂಪುಟ ವಿಸ್ತರಿಸಲು ಯಾವುದೇ ಅಡ್ಡಿ ಇಲ್ಲ. ಹಾಗಾಗಿ ಸದ್ಯದಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇನೆ  ಇನ್ನು 2-3 ದಿನಗಳಲ್ಲಿ ದೆಹಲಿಗೆ ತೆರಳಲು ನಿರ್ಧರಿಸಿದ್ದೇನೆ. ಆದರಂತೆ ದೆಹಲಿಗೆ ತೆರಳಿ ವರಿಷ್ಠ ನಾಯಕರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಸಮಯ ನಿಗದಿ ಮಾಡುತ್ತೇನೆ ಎಂದು ಅವರು ಹೇಳಿದರು. ಈಗಿರುವ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆಗೆ ಯಾವುದೇ ಬಾಧಕಗಳಿಲ್ಲ. ಹಾಗಾಗಿ ಸಂಪುಟ ವಿಸ್ತರಣೆ ನಿಶ್ಚಿತವಾಗಿ ನಡೆಯಲಿದೆ ಎಂದು ಅವರು ಹೇಳಿದರು.





ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದರು. ಆದರೆ ಅನುಮತಿ ಸಿಕ್ಕಿರಲಿಲ್ಲ, ಈ ಸಲ ದೆಹಲಿ ಭೇಟಿ ಫಲಪ್ರದವಾಗಲಿದೆ ಎಂದು ಹೇಳಲಾಗುತ್ತಿದೆ.





ಸಚಿವ ಸಿಟಿ ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದ್ದು, ಅವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡಲು ಅವಕಾಶ ಮಾಡಿಕೊಡಲಾಗಿದೆ. ಇನ್ನುಳಿದಂತೆ ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭವಾಗಿದ್ದು, ಹಲವು ಶಾಸಕರು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಪರ್ಕಿಸಿ ಒತ್ತಡ ಹೇರುತ್ತಿದ್ದಾರೆ.





ಎಂ.ಟಿ. ಬಿ. ನಾಗರಾಜು ಮತ್ತು ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ಸ್ಥಾನ ಸಿಗುವುದು ಖಚಿತವಾಗಿದೆ. ಉಳಿದ ಸ್ಥಾನಗಳಿಗೆ ಬಿಜೆಪಿಯಲ್ಲೂ ಒಂದು ಡಜನ್‌ಗೂ ಹೆಚ್ಚು ಶಾಸಕರು ಆಕಾಂಕ್ಷಿಯಾಗಿದ್ದು, ಹಿರಿಯ ಶಾಸಕರುಗಳಾದ ಉಮೇಶ್‌ಕತ್ತಿ, ಅರವಿಂದ ಲಿಂಬಾವಳಿ ಇಲ್ಲವೆ ಸಿ.ಪಿ. ಯೋಗಿಶ್ವರ್ ರವರಿಗೆ ಸಚಿವರಾಗುವ ಯೋಗ ಸಿಗುವ ಸಾಧ್ಯತೆಗಳಿವೆ. ಮುಖ್ಯಮಂತ್ರಿಯಡಿಯೂರಪ್ಪನವರು ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿದ ನಂತರ ಎಲ್ಲವೂ ಅಂತಿಮಗೊಳ್ಳಲಿದೆ. ವರಿಷ್ಠರು ಒಪ್ಪಿದರೆ ಈ ವಾರದ ಕೊನೆಯಲ್ಲಿ ಸಂಪುಟ ವಿಸ್ತರಣೆಗೆ ಮಹೋರ್ತ ನಿಗದಿಯಾಗುವ ಸಾಧ್ಯತೆಗಳಿವೆ.

Find Out More:

Related Articles: