'ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮಸ್ಯೆ ಆಗಬಾರದು'
'ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಿ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ.
ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ಬರ ನಿರ್ವಹಣೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಬಿತ್ತನೆ ಬೀಜ ಸಂಗ್ರಹ ಮಾಡಬೇಕು. ರೈತರಿಗೆ ಯಾವುದೇ ರೀತಿ ಸಮಸ್ಯೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು ಸಿಎಂ ಹೇಳಿದ್ದಾರೆ.
ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗಲೇಬಾರದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆ ಇದ್ದರೆ ಖಾಸಗಿಯವರ ಬಳಿ ಒಡೆದುಕೊಳ್ಳಿ. ಅದಕ್ಕೆ ಅಗತ್ಯ ಇರುವಷ್ಟು ಹಣವನ್ನು ಸರ್ಕಾರ ಕೊಡುತ್ತದೆ ಎಂದರು.