ರಾಜ್ಯದ ಪ್ರತಿ ಮನೆಗೂ ಕುಡಿಯುವ ನೀರು

somashekhar

ಜಲಧಾರೆ ಯೋಜನೆ ಮೂಲಕ ರಾಜ್ಯದ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಜನತಾ ದರ್ಶನದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ಎಲ್ಲ ಮನೆಗಳಿಗೆ ನೀರು ಒದಗಿಸಲಾಗುತ್ತದೆ ಎಂದರು.

 

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಭಾಗಗಳ ಕೆರೆಗಳಿಗೆ ಶಾಶ್ವತ ನೀರು ತುಂಬಿಸುವ ಯೋಜನೆ ಜಾರಿಯಾಗಿದ್ದು, ಸುಮಾರು 458 ರೂ.ಗಳ ವೆಚ್ಚದಲ್ಲಿ ಕಾವೇರಿ ನದಿ ಮೂಲದಿಂದ ಇಗ್ಗಲೂರು ಬ್ಯಾರೇಜ್ ಗೆ ನೀರು ಹರಿಸಲಾಗುವುದು ಎಂದರು. 

 

ಈ ಮೂಲಕ ಕೆರೆಗಳನ್ನು ತುಂಬಿಸುವ ಕೆಲಸ ನಡೆಯುತ್ತಿದೆ. ಶಾಶ್ವತ ನೀರಾವರಿ ಯೋಜನೆಗೆ ಇದು ಸಹಕಾರಿ ಆಗಲದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಅವರಿಗೆ ಕ್ಷೇತ್ರದ ಜನ ರಸ್ತೆಯುದ್ದಕ್ಕೂ ಸ್ವಾಗತ ಕೋರಿದರು.

 

Find Out More:

Related Articles: