ಇಂದು ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಪಾಂಡೀಚೇರಿ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಅಸ್ಸಾಂನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅಲ್ಲದೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಕೊಂಕಣ ಗೋವಾದಲ್ಲಿಯೂ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ದಾರಾಕಾರ ಮಳೆ ಸುರಿದು, ಇಡಿ ಕೊಡಗಿಗೆ ಕೊಡಲೇ ಕೊಚ್ಚಿಕೊಂಡು ಹೋಗಿತ್ತು. ಜೊತೆಗೆ ಇವತ್ತಗೂ ಅಲ್ಲಿನ ಜನರು ಮನೆ ಮಠ ಇಲ್ಲದೇ ತುಂಬಾ ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈಗ ಬರುವ ಮಳೆಯೂ ಜನರ ಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರದಿದ್ದರೆ ಸಾಕು ಎನ್ನುತ್ತಿದ್ದಾರೆ ಜನರು