ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ ಡಿಕೆಶಿ

somashekhar
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವ ಮೊದಲು ರೈತರ ಸಾಲಮನ್ನಾ ಸೇರಿದಂತೆ ಅನೇಕ ವಿಷಯಗಳ ಪರಿಹಾರಕ್ಕೆ ಆತುರದಿಂದ ವರ್ತಿಸುತ್ತಿದ್ದರು. ಆದರೆ ಇದೀಗ ಎಲ್ಲದಕ್ಕೂ ದೆಹಲಿಯಲ್ಲಿರುವ ಹೈಕಮಾಂಡ್ನತ್ತ ಬೆರಳು ತೋರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ. ಹೌದು ತಮ್ಮ ನಿವಾಸದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ತೀವ್ರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜೊತೆಗೆ ಯಡಿಯೂರಪ್ಪ ಅವರ ವಿರುದ್ಧ ಹರಿಹಾಯ್ದರು. 

ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ನೆರೆ ಹಾವಳಿ ಉಂಟಾಗಿದೆ. ಇದಕ್ಕೆ ಸಿಎಂ ಅವರು ಸ್ಪಂಧಿಸಬೇಕಿತ್ತು. ಆದರೆ ಅವರು ದೆಹಲಿಗೆ ಹೋದರು. ಇದು ಯಡಿಯೂರಪ್ಪ ಅವರ ಆಡಳಿತ ವೈಖರಿ ಎಂದು ಟೀಕಿಸಿದರು. ನಾನು ಆತುರದಿಂದ ಯಾವುದೇ ಆರೋಪ ಮಾಡೋದಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ತೋರಿಸಿದ ಆತುರವನ್ನು ಇದೀಗ ಆಡಳಿತ ನಡೆಸುವಾಗ ತೋರಿಸುತ್ತಿಲ್ಲ ಎಂದು ಹೇಳಿದರು. 

ರಾಜ್ಯದ ಜನರು ವಿದ್ಯಾವಂತರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಒಳ್ಳೆಯ ಅವಕಾಶ ಸಿಕ್ಕಿದೆ. ಅವರು ಅದನ್ನು ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ಸರ್ಕಾರ ರಚನೆ ಆಗಿ 10 ದಿನಗಳಾಗಿವೆ. ಈವರೆಗೂ ಸಂಪುಟ ವಿಸ್ತರಣೆ ಆಗಿಲ್ಲ. ಒನ್ ಮ್ಯಾನ್ ಶೋ  ನಡೆಯುತ್ತಿದೆ ಎಂದು ಅವರು ಲೇವಡಿ ಮಾಡಿದರು. 

ಹಲವಾರು ಭಾಗಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಬಂದು ನನ್ನನ್ನು ಭೇಟಿ ಮಾಡುತ್ತಾರೆ. ಅವರ ಸಮಸ್ಯೆಗಳನ್ನು ನಾನು ಬಗೆಹರಿಸುತ್ತೇನೆ. ಒಂದು ವೇಳೆ ಮೀಡಿಯಾದವರಿಗೆ ಏನಾದರೂ ಯಾವುದಾದರೂ ಸಮಸ್ಯೆ ಇದ್ದರೆ ಹೇಳಲಿ. ಅವರ ಸಮಸ್ಯೆಯನ್ನೂ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. 

ಇನ್ನು ಗೋಕಾಕ್ ಕ್ಷೇತ್ರದ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಅದರ ಬಗ್ಗೆ ಮಾತನಾಡು ವುದಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಿಎಲ್‍ಪಿ  ಸಿದ್ದರಾಮಯ್ಯ ಅವರು ಉಸ್ತುವಾರಿ ನೋಡಿಕೊಳ್ಳುತ್ತಾರೆ. ಅದರ ಬಗ್ಗೆ ನನಗೆ ಹೆಚ್ಚೇನೂ ಗೊತ್ತಿಲ್ಲ. ಆದರೆ ಅವರು ನನ್ನ ಸಲಹೆ ಕೇಳಿದರೆ ನಾನು ಖಂಡಿತ ಕೊಡುತ್ತೇನೆ ಎಂದು ಹೇಳಿದರು. 


Find Out More:

Related Articles: