ರಾಜ್ಯದಲ್ಲಿ ಸೃಷ್ಟಿಯಾಗುತ್ತಾ ಮೂರು ಡಿಸಿಎಂ ಹುದ್ದೆಗಳು?

somashekhar
ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯು ಇದೀಗ ಯಾರಿಗೆ ಸಚಿವ ಸ್ಥಾನ ನೀಡಬೇಕು. ಅತೃಪ್ತರನ್ನು ಹೇಗೆ ಸಮಾಧಾನ ಮಾಡಬೇಕು ಎಂದ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿದೆ.  ಇದೇ ಕಾರಣಕ್ಕೆ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆ ವಹಿಸಿರುವ ರಾಜ್ಯ ಬಿಜೆಪಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸಲು ಮುಂದಾಗಿದೆ.

ಹೌದು, ಸಚಿವ ಸ್ಥಾನ ವಂಚಿತರು ಇದೀಗ ಯಡಿಯೂರಪ್ಪ ಅವರ ವಿರುದ್ಧ ಗರಂ ಆಗಿದ್ದಾರೆ. ಹೀಗಾಗಿ ಮೂವರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಬಿಜೆಪಿ ಸಜ್ಜಾಗಿದೆ ಎನ್ನಲಾಗುತ್ತಿದೆ. ಅಷ್ಟಕ್ಕೂ ನಿಮಗೆಲ್ಲ ಆಂದ್ರ ಪ್ರದೇಶದ ಕಥೆ ಗೊತ್ತಿರಬಹುದು. ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ಜಾತಿ ಹಾಗೂ ಪ್ರದೇಶವಾರು ಆಧಾರದ ಮೇಲೆ ಐದು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸುವ ರೀತಿಯಲ್ಲಿ ನಡೆದುಕೊಂಡಿದ್ದರು.

ಇದೀಗ ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅನುಸರಿಸಲಾಗುತ್ತಿದೆ. ದೆಹಲಿಯ ಬಿಜೆಪಿ ನಾಯಕರು ಹೇಳಿರೋದಾದರೂ ಏನು? ದಲಿತ, ಒಕ್ಕಲಿಗ ಮತ್ತು ಹಿಂದುಳಿದ ಸಮುದಾಯಕ್ಕೆ ಸೇರಿದ ಮೂವರಿಗೆ ಈ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಸಾಮಾಜಿಕ ನ್ಯಾಯ ಪರಿಪಾಲನೆ ಮಾಡಲು ಜಗನ್ ಮೋಹನ್ ರೆಡ್ಡಿ ತಂತ್ರವನನ್ನು ಅನುಸರಿಸುತ್ತಿದ್ದಾರೆ. 

ಹಾಗಾದರೆ ಆ ಮೂವರು ಕ್ಯಾಂಡಿಡೇಟ್ ಯಾರು ಅನ್ನೋದು ಇಲ್ಲಿದೆ ನೋಡಿ. ಒಂದು ಒಕ್ಕಲಿಗ ಸಮುದಾಯದಿಂದ ಆರ್.ಅಶೋಕ್, ಅಥವಾ ಅಶ್ವಥ್ ನಾರಾಯಣ್, ಮತ್ತೊಂದು ದಲಿತ ಸಮುದಾಯದಿಂದ ಗೋವಿಂದ್ ಕಾರಜೋಳ, ಹಾಗೂ ಹಿಂದುಳಿದ ಸಮುದಾಯದಿಂದ ಕೆ.ಎಸ್.ಈಶ್ವರಪ್ಪ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡುವ ಕುರಿತು ಚಿಂತನೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ಈ ಹಿಂದೆ 2008ರಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡಿತ್ತು. ಆಗ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದರು. ಆಗ ಒಕ್ಕಲಿಗ ಸಮುದಾಯದಿಂದ ಆರ್.ಅಶೋಕ್, ಹಾಗೂ ಹಿಂದುಳಿದ ಸಮುದಾದಯದಿಂದ ಕೆ.ಎಸ್.ಈಶ್ವರಪ್ಪ ಅವರಿಗಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿತ್ತು.  ಆದರೆ ಈ ಬಾರಿ ಅಧಿಕಾರಕ್ಕೆ ಹಪಾಹಪಿಸುವವರು ಹೆಚ್ಚಾಗಿದ್ದು, ಮೂವರು ಡಿಸಿಎಂ ಹುದ್ದೆ ಸೃಷ್ಟಿಸುವ ಅನಿವಾರ್ಯತೆ ಎದುರಾಗಿದೆ.



Find Out More:

dcm

Related Articles: