ರೈತರ ಮೇಲಿನ ಮೊಕದ್ದಮೆ ಹಿಂಪಡೆದ ಬಿಎಸ್‌ವೈ

frame ರೈತರ ಮೇಲಿನ ಮೊಕದ್ದಮೆ ಹಿಂಪಡೆದ ಬಿಎಸ್‌ವೈ

somashekhar
ಬಿ.ಎಸ್.ಯಡಿಯೂರಪ್ಪ ಅವರಿಗೆ ರೈತ ಮುಖಂಡರು ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಬೇಡಿಕೆಗೆ ಯಡಿಯೂರಪ್ಪ ಯೆಸ್ ಎಂದಿದ್ದಾರೆ. ಹೌದು ಹಾಗಾದರೆ ಆ ಬೇಡಿಕೆ ಯಾವುದು ಅಂದರೆ ಇಲ್ಲಿದೆ ನೋಡಿ. ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಮೇಲೆ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಹೀಗಾಗಿ ಅವುಗಳಿಂದ ರೈತರಿಗೆ ತೊಂದರೆ ಆಗುತ್ತಿದೆ. ತಕ್ಷಣವೇ ಆ ಮೊಕದ್ದಮೆಗಳನ್ನು ಹಿಂಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಮನವಿಗೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ಹೌದು, ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಿರಿ ಎಂದು ಹೇಳಿದ್ದಾರೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರೈತ ಹೋರಾಟದಲ್ಲಿ ದಾಖಲಾಗಿರುವ ಮೊಕದ್ದಮೆಗಳ ಸಂಪೂರ್ಣ ಮಾಹಿತಿ ನೀಡುವಂತೆಯೂ ಕೇಳಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಬೇಡಿಕೆ ಇಟ್ಟವರು ಬೇರೆ ಯಾರೂ ಅಲ್ಲ. ರಾಜ್ಯ ಕಬ್ಬು ಬೆಳೆಗಾರರ ಸಂಗದ ಅಧ್ಯಕ್ಷರಾದ ಕುರುಬೂರು ಶಾಂತಕಕುಮಾರ್ ಅವರು.

ನಂತರ ಮಾತನಾಡಿದ ಅವರು, ಹೋರಾಟ ಮಾಡುವಾಗ ರೈತರ ಮೇಲೆ ಕೇಸು ದಾಖಲು ಮಾಡಲಾಗಿದೆ. ಇದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಬೇರೆ ಬೇರೆ ಹೋರಾಟಗಳಲ್ಲಿ ಭಾಗಿಯಾಗಿದ್ದ ರೈತರ ಮೇಲೆ ಮೊಕದ್ದಮೆಗಳು ದಾಖಲಾಗಿವೆ. ನ್ಯಾಯಾಲಯಗಳಲ್ಲಿ ರೈತರು ಅಲೆಯುವಂತಾಗಿದೆ. ಈಗಾಗಲೇ ಒಂದು ಕಡೆ ಬರಗಾಲ ಮತ್ತೊಂದು ಕಡೆ ನೆರೆ ಹಾವಳಿ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೆ ಮೊಕದ್ದಮೆಗಳಿಗೆ ಅಲೆಯಲು ಆರ್ಥಿಕ ಸಮಸ್ಯೆ ಆಗುತ್ತಿದೆ ಎಂದು ಹೇಳಿದರು.

ಶಾಂತಕುಮಾರ್ ಅವರು ಈ ಹಿಂದೆಯೂ ಮುಖ್ಯಮಂತ್ರಿಗಳಿಗೆ ಈ ಬೇಡಿಕೆ ಇಟ್ಟಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಿರಲೇ ಇಲ್ಲ. ಹೌದು, ಅವರು ಕೇವಲ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಾಖಲಿಸಿದ್ದ ಮೊಕದ್ದಮೆಗಳನ್ನು ಹಿಂಪಡೆದರು ಎನ್ನುವ ಆರೋಪ ಕೇಳಿ ಬಂದಿತ್ತು. ಆದರೆ ರೈತರ ಒಂದೇ ಒಂದು ಪ್ರಕರಣವನ್ನು ಹಿಂಪಡೆಯಲಿಲ್ಲ ಎಂದು ರೈತರಲ್ಲಿ ಆಕ್ರೋಶವಿತ್ತು. ಇದು ರೈತರ ಮೇಲೆ ಸಮ್ಮಿಶ್ರ ಸರ್ಕಾರಕ್ಕೆ ಇದ್ದ ಬದ್ಧತೆ ಎಂದು ಟೀಕಿಸಿದರು. 


Find Out More:

Related Articles:

Unable to Load More