ಅಭ್ಯರ್ಥಿ ಹುಡುಕಾಟದಲ್ಲಿ ನಿರತವಾದ ಬಿಜೆಪಿ

somashekhar
ಬೆಂಗಳೂರು: ಬಹು ಸರ್ಕಸ್ ಗಳನ್ನು ನಡೆಸಿ ಕೊನೆಗೂ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಬಿಜೆಪಿಗೆ ಇದೀಗ ಉಪಚುನಾವಣೆ ಬಿಸಿ ತಟ್ಟಿದೆ. ಚುನಾವಣಾ ಆಯೋಗವು ಇತ್ತೀಚೆಗಷ್ಟೇ ಉಪಚುನಾವಣಾ ದಿನಾಂಕ  ನಿಗದಿಪಡಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ನಡೆಯುವ ಹದಿನೈದು ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಕೆಲ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಬೇಕೆಂಬ ಆಗ್ರಹ ವ್ಯಕ್ತವಾಗಿರುವುದು ದೊಡ್ಡ ತಲೆನೋವಾಗಿದೆ. 
 
ಪಕ್ಷದ ಆಂತರಿಕ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದ್ದು, ಐದಾರು ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು ಎಂದು ಮುಖಂಡರು ಒತ್ತಾಯ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುನಿರತ್ನ ನಾಯ್ಡು ಪರ ಕೆಲಸ ಮಾಡಲು ಬಿಜೆಪಿ ಕಾರ್ಯಕರ್ತರು ತಯಾರಿಲ್ಲ. ಇದು ಸಿಎಂ ಬಿಎಸ್‌ವೈ ಬಣದ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲ ದಿನಗಳ ಹಿಂದೆ ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜುಗೌಡ ಅವರನ್ನು ಬಿಎಸ್‌ವೈ ಕರೆಸಿ ಮಾತುಕತೆ ನಡೆಸಿದ್ದಾರೆ. ಆದರೆ ಮುನಿರತ್ನ ಪರ ಕೆಲಸ ಮಾಡಲು ತುಳಸಿ ಮುನಿರಾಜು ಗೌಡ ಖಡಾಖಂಡಿತವಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೇ ಲೇಔಟ್‌ ಕ್ಷೇತ್ರದಲ್ಲಿ ಗೋಪಾಲಯ್ಯ ಪರ ಕೆಲಸ ಮಾಡುವುದಕ್ಕೆ ಕಾರ್ಯಕರ್ತರು ನಿರಾಕರಿಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಗೋಪಾಲಯ್ಯ ಬೆಂಬಲಿಗರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆನಡೆಸಿದ್ದಾರೆ. ಅದೆಲ್ಲವನ್ನೂ ಮರೆತು ಒಂದಾಗಿ ಕೆಲಸ ಮಾಡುವುದು ಸಾಧ್ಯವಿಲ್ಲಎಂಬ ವಾದ ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಕೇಂದ್ರ ಸಚಿವ ಸದಾನಂದಗೌಡ ಹಾಗೂ ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಸಂಧಾನಕಾರರಾಗಿ ಬಳಸಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಅಥಣಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿಮಹೇಶ್‌ ಕುಮಠಳ್ಳಿ ಬೇಸರ ವ್ಯಕ್ತಪಡಿಸಿದ್ದಾರೆ. ಹೊಸಕೋಟೆಯಲ್ಲೂಎಂ.ಟಿ.ಬಿ.ನಾಗರಾಜ್‌ ಪರ ಪೂರ್ಣ ಮನಸ್ಸಿನಿಂದ ಬಿಜೆಪಿ ಮುಖಂಡರು ಕೆಲಸ ಮಾಡಲು ಒಪ್ಪುತ್ತಿಲ್ಲ. ಈ ಎಲ್ಲದರ ಹಿನ್ನೆಲೆಯಲ್ಲಿಕೆಲ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಬೇಕು. ಇದಕ್ಕಾಗಿ ಅನರ್ಹ ಶಾಸಕರ ಮನವೊಲಿಸಬೇಕೆಂಬ ಆಗ್ರಹ ಬಿಜೆಪಿ ಆಂತರಿಕ ವಲಯದಲ್ಲಿ ವ್ಯಕ್ತವಾಗಿದೆ.


Find Out More:

Related Articles: