ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಕಾಶ್ಮೀರ ಸಮಸ್ಯೆ ಇತ್ಯರ್ಥ ಮಾಡಲು ಮಧ್ಯಸ್ಥಿಕೆಗೆ ಸಿದ್ಧ ಎಂದು ವಿಶ್ವದ ದೊಡ್ಡಣ್ಣ ಟ್ರಂಪ್ ತಿಳಿಸಿದ್ದಾರೆ. ಪಾಕ್ ಪ್ರಧಾನಿ ಇಮ್ರಾನ್ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಿದ್ದು, ವಿಶ್ವ ಸಂಸ್ಥೆಯ 74ನೇ ಸಾಮಾನ್ಯ ಸಭೆಗೆಂದು ಅಮೆರಿಕಕ್ಕೆ ತೆರಳಿದ್ದ ಇಮ್ರಾನ್ ಖಾನ್ಗೆ ಟ್ರಂಪ್ ಈ ಕೆಳಗಿನಂತೆ ಹೇಳಿದ್ದಾರೆ ಎನ್ನಲಾಗಿದೆ.
ಜಮ್ಮು-ಕಾಶ್ಮೀರ ವಿಷಯದ ಬಗ್ಗೆ ಮಧ್ಯಸ್ಥಿಕೆ ವಹಿಸಲು ಅವಕಾಶ ಸಿಕ್ಕರೇ ನಾನು ಸಮಸ್ಯೆ ಬಗೆಹರಿಸಲು ಸಿದ್ದನಿದ್ದೇನೆ. ಈ ವಿವಾದವೊಂದು ಸಂಕೀರ್ಣ ವಿಚಾರ. ಈ ಹಿಂದೆಯೇ ಪಾಕ್-ಭಾರತದ ನಡುವೇ ಕಾಶ್ಮೀರದ ಸಮಸ್ಯೆ ಶುರುವಾಗಿದೆ. ಹಾಗಾಗಿ ಇದಕ್ಕೊಂದು ಅಂತ್ಯ ಹಾಡಬೇಕಿದೆ. ಇಬ್ಬರೂ ಒಪ್ಪಿದರೇ ನಾನು ಮಧ್ಯಸ್ಥಿಕೆಗೆ ಸಿದ್ದನಿದ್ದೇನೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ಧಾರೆ.
ಇತ್ತೀಚೆಗಿನ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಟ್ರಂಪ್ ಭಾರತಕ್ಕೆ ಸಂಪೂರ್ಣ ನೆರವು ನೀಡುವ ಭರವಸೆ ನೀಡಿದ್ದರು. ಭಾರತದ ಪ್ರಧಾನಿ ಮೋದಿಯವರ ಅಪಾರ ಸಂಖ್ಯೆಯ ಭಾರತೀಯ ಮೂಲದ ಅಮೆರಿಕನ್ನರ ಮಧ್ಯೆಯೇ ಈ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೀಗ ಇಮ್ರಾನ್ ಖಾನ್ ಭೇಟಿ ವೇಳೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸಲು ಮುಂದಾದ ಟ್ರಂಪ್ ನಡೆಗೆ ಮೆಚ್ಚುಗೆ ವ್ಯಕ್ತವಾಗುತಿದೆ. ಇದೇ ಅಮೆರಿಕ ಅಧ್ಯಕ್ಷ ಟ್ರಂಪ್ ನೇತೃತ್ವದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಭೆ ಸೇರಲಿದ್ದಾರೆ ಎನ್ನುತ್ತಿದ್ದರು.
ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದ್ದರೂ ಭಾರತದ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆಂದು ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಆದರೆ, ಕೇಂದ್ರ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದ್ದು, “ಕಾಶ್ಮೀರ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಾಗಿ ಟ್ರಂಪ್ ಅವರು ಯಾವ ಪ್ರಸ್ತಾವವನ್ನೂ ಮುಂದಿಟ್ಟಿಲ್ಲ” ಎಂದಿದ್ದಾರೆ. ಹಾಗೆಯೇ, ಶಿಮ್ಲಾ ಒಪ್ಪಂದ ಮತ್ತು ಲಾಹೋರ್ ಘೋಷಣೆಯ ಪ್ರಕಾರವಾಗಿ ಪಾಕಿಸ್ತಾನದೊಂದಿಗಿನ ಎಲ್ಲಾ ಸಮಸ್ಯೆಗಳನ್ನೂ ದ್ವಿಪಕ್ಷೀಯವಾಗಿಯೇ ಬಗೆಹರಿಸಿಕೊಳ್ಳುತ್ತೇವೆ ಎಂದು ಬಹಳ ಸ್ಪಷ್ಟವಾಗಿ ಹೇಳುತ್ತಿದ್ದೇವೆ. ಯಾರಿಗಾದರೂ ಅನುಮಾನ ಇದ್ದರೆ ಈ ಸ್ಪಷ್ಟನೆಯಿಂದ ಉತ್ತರ ಸಿಗುತ್ತದೆಂದು ಭಾವಿಸುತ್ತೇನೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದರು.