ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕರಾದ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್‌ನ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಮತ್ತು ಆನಂದ್ ಶರ್ಮಾ ಭೇಟಿಯಾಗಿ ಮಾತನಾಡಿಸಿದ್ದಾರೆ. ಈ ಭೇಟಿ ಹಿಂದೆ ಸೋನಿಯಾ ಅಭಯವಿದೆ ಎಂಬ ಸುದ್ದಿ ತಿಳಿದುಬಂದಿದೆ.
ಗುರುವಾರ ಡಿ.ಕೆ. ಶಿವಕುಮಾರ್ ಅವರ ಸೋದರ ಡಿ.ಕೆ. ಸುರೇಶ್ ಜೊತೆ ತಿಹಾರ್ ಜೈಲಿಗೆ ತೆರಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಅಹ್ಮದ್ ಪಟೇಲ್ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕ ಆನಂದ್ ಶರ್ಮಾ ಅವರು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಹೋರಾಟವನ್ನು ಕಾಂಗ್ರೆಸ್ ಬೆಂಬಲಿಸಿದೆ, ನಿಮ್ಮ ಹಿಂದೆ ನಾವಿದ್ದೇವೆ ಎಂದು ಧೈರ್ಯ ನೀಡಿದ್ದಾರೆ.
ತಿಹಾರ್ ಜೈಲು ತನಕ ಅಹ್ಮದ್ ಪಟೇಲ್ ಮತ್ತು ಆನಂದ್ ಶರ್ಮಾ ಅವರು ಡಿ.ಕೆ.ಸುರೇಶ್ ಅವರ ವಾಹನದಲ್ಲೇ ಆಗಮಿಸಿದರು. ಡಿ.ಕೆ. ಶಿವಕುಮಾರ್ ಜೊತೆ ಸುಮಾರು ಅರ್ಧ ಗಂಟೆ ಈ ನಾಯಕರು ಮಾತುಕತೆ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ: ಹಾಗಾದರೆ ಡಿಕೆಶಿ ಮುಂದಿರುವ ಆಯ್ಕೆಗಳೇನು?
ಜಾಮೀನು ಕೋರಿ ಡಿಕೆಶಿ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದ ಮರುದಿನವೇ ಡಿ.ಕೆ.ಶಿವಕುಮಾರ್ ಪರ ವಕೀಲರು ದೆಹಲಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ದಾಖಲಿಸಿದ್ದಾರೆ. ಗುರುವಾರ ಡಿ.ಕೆ.ಶಿವಕುಮಾರ್ ಪರ ವಕೀಲ ಮಾಯಾಂಕ್ ಜೈನ್ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ. ಗಂಭೀರ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲಿ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ, ಡಿಕೆಶಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಡಿಕೆಶಿಗಿಲ್ಲ ಜಾಮೀನು: ತಿಹಾರ್ ಜೈಲು ವಾಸ ಮುಂದುವರಿಕೆ. ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನು ಹೊರತು ಪಡಿಸಿ ಇತರ ಅಧಿಕಾರಿಗಳ ಮುಂದೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಾಕ್ಷ್ಯದ ಗುಣವಿಲ್ಲ ಎಂದು ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ. ತೀರ್ಪನ್ನು ಕಾದಿರಿಸಲಾಗಿದೆ.