ಅಯೋಧ್ಯೆ ತೀರ್ಪಿಗೆ ದಿನಗಣನೆ ಶುರು, ರಾಷ್ಟ್ರಾದ್ಯಂತ ಹೈ ಅಲರ್ಟ್

frame ಅಯೋಧ್ಯೆ ತೀರ್ಪಿಗೆ ದಿನಗಣನೆ ಶುರು, ರಾಷ್ಟ್ರಾದ್ಯಂತ ಹೈ ಅಲರ್ಟ್

somashekhar
ನವದೆಹಲಿ: ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸುಪ್ರಿಂ ಕೋರ್ಟ್ ನ ಅಯೋಧ್ಯೆ ತೀರ್ಪು ಇದೀಗ ದಿನಗಣನೆ ಶುರು ವಾಗಿದೆ. ಇದೇ ವರ್ಷವೇ ನವೆಂಬರ್ ತಿಂಗಳಿನಲ್ಲಿ ತೀರ್ಪು ಹೊರಬೀಳಲಿದ್ದು, ಯಾವುದೇ ಅಹಿತಕರ ಘಟನೆಗಳನ್ನು ನಿಭಾಯಿಸಲು ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹಸಚಿವಾಲಯ ಈಗಿನಿಂದಲೇ ಸೂಚನೆ ನೀಡಿದೆ. ಆದ್ದರಿಂದ ಉತ್ತರ ಪ್ರದೇಶದ ಅಯೋಧ್ಯೆ, ಸೇರಿದಂತೆ ಇತರೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಯಾಗಿದೆ. 

ಇದೇ ವೇಳೆ ನವರಾತ್ರಿ ಹಬ್ಬ ನಡೆಯುತ್ತಿರುವ ಹಿನ್ನೆಲೆಯಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಶೇಷವಾಗಿ ಅಯೋಧ್ಯೆಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ.  ಹೈ ಅಲರ್ಟ್ ಘೋಷಿಸಿರುವ ಹಿನ್ನೆಲೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ಅಯೋಧ್ಯೆ ನಗರದಲ್ಲಿ ನಿಯೋಜಿಸಲಾಗಿದೆ. ದುರ್ಗಾ ಪೂಜಾ ಹಾಗೂ ದಸರಾ ಮೆರವಣಿಗೆ ವೇಳೆ ಡ್ರೋಣ್ ಕಣ್ಗಾವಲು ಇಡಲಾಗಿದೆ. ಅಲ್ಲದೆ ಮೆರವಣಿಗೆ ಗಳಲ್ಲಿ ಬಣ್ಣಗಳನ್ನು ಬಳಸದಂತೆ ಪೂಜಾ ಸಮಿತಿಗೆ ತಿಳಿಸಿದ್ದೇವೆ. ಇದರ ಬದಲಿಗೆ ಹೂಗಳನ್ನು ಉಪಯೋಗಿಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದುರ್ಗಾ ವಿಗ್ರಹ ಮೆರವಣಿಗೆ ಹಾಗೂ ದಸರಾ ಆಚರಣೆಗಳು ಸೋಮವಾರದಿಂದ ಪ್ರಾರಂಭವಾಗಲಿದ್ದು, ವಿವಿಧ ರಾಮ್ ಲೀಲಾಗಳು ದೀಪಾವಳಿ ತಿಂಗಳವರೆಗೆ ಮುಂದುವರಿಯಲಿವೆ.

ದೀಪಾವಳಿಯ ಮುನ್ನಾದಿನ ರಾಜ್ಯ ಸರ್ಕಾರ ಆಯೋಜಿಸುತ್ತಿರುವ ಮೂರು ದಿನಗಳ ದೀಪೋತ್ಸವ ಕಾರ್ಯಕ್ರಮದಲ್ಲಿ ಸಹ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರಿರುವುದರಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.  ಹೆಚ್ಚು ಜನ ಆಗಮಿಸುತ್ತಿರುವ ಹಿನ್ನೆಲೆ ಎಲ್ಲ ಹೋಟೆಲ್, ಅತಿಥಿ ಗೃಹ, ಧರ್ಮಶಾಲೆ, ವಸತಿ ಗೃಹ, ಹಾಸ್ಟೆಲ್ ಹಾಗೂ ಹೋಮ್ ಸ್ಟೇಗಳನ್ನು ಪರಿಶೀಲಿಸುವಂತೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ. ಈ ತೀರ್ಪಿಗಾಗಿ ವರ್ಷಗಳಿಂದ ಕಾಯಲಾಗುತ್ತಿದೆ. ಕೇಂದ್ರ ಸರ್ಕಾರವು ಕಳೆದ ಇಪ್ಪತ್ತು ವರ್ಷಗಳಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಇದೀಗ ಸುಪ್ರಿಂ ಕೋರ್ಟ್ ಅಯೋಧ್ಯೆ ತೀರ್ಪು ನೀಡಲು ಮುಂದಾಗಿದ್ದು, ಸರ್ಕಾರ,  ಉತ್ತರ ಪ್ರದೇಶದ ಜನರು, ಹಿಂದುಗಳು ಸೇರಿದಂತೆ ಇದೀಗ ತೀರ್ಪಿನತ್ತ  ಎಲ್ಲರ ಚಿತ್ತ ನೆಟ್ಟಿದೆ.




Find Out More:

Related Articles:

Unable to Load More