ಕಾಂಗ್ರೆಸ್ ಯಶಸ್ಸಿಗೆ ರಾಗಾ ಕಾರಣವಾ!?

somashekhar
ನವದೆಹಲಿ: ಮೂರು ದಿನಗಳ ಹಿಂದೆಯಷ್ಟೇ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಭಾರತೀಯ ಜನತಾ ಪಕ್ಷವು ಗೆದ್ದಿದ್ದರು ಸಹ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಕಾಂಗ್ರೆಸ್ ನ ಗುರಿ ತಕ್ಕಮಟ್ಟಿಗೆ ಯಶಸ್ವಿಯಾಗಿತ್ತು. ಆದರೆ ಎರಡು ರಾಜ್ಯಗಳಚುನಾವಣಾ ಪ್ರಚಾರದಿಂದ ಬಹುತೇಕ ದೂರವೇ ಇದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಈ ಯಶಸ್ಸಿನ ಶ್ರೇಯ ನೀಡುವ ಯತ್ನವೊಂದು ನಡೆದಿದ್ದು, ಅಚ್ಚರಿಗೆ ಕಾರಣವಾಗಿದೆ. ಜೊತೆಗೆ ಇದು ಪಕ್ಷದಲ್ಲಿನ ಹಿರಿ-ಕಿರಿಯರ ವಿರುದ್ಧಕ್ಕೆ ಕಾರಣವಾಗಿದೆಯಂತೆ. 

ಕಾಂಗ್ರೆಸ್‌ನ ಅಧಿಕೃತ ಟ್ವೀಟರ್‌ ಖಾತೆಯಲ್ಲಿ ಶುಕ್ರವಾರ 2 ನಿಮಿಷದ ವಿಡಿಯೋವೊಂದನ್ನು ಪೋಸ್ಟ್‌ ಮಾಡಲಾಗಿದ್ದು, ಇದರಲ್ಲಿ ಉಭಯ ರಾಜ್ಯಗಳಲ್ಲಿ ಕಾಂಗ್ರೆಸ್‌ ಗೆಲುವಿಗೆ ರಾಹುಲ್‌ ಅವರೇಕಾರಣ. ಅದರಲ್ಲೂ ಹರಾರ‍ಯಣದಗೆಲುವು ಅತ್ಯದ್ಭುತ ಎಂದು ತಿಳಿಸಲಾಗಿದೆ. ಚುನಾವಣಾಫಲಿತಾಂಶವು ಪ್ರಜಾಪ್ರಭುತ್ವ ರಕ್ಷಣೆ ಮಾಡಬೇಕೆಂಬ ತಮ್ಮ ಹೋರಾಟಕ್ಕೆ ಜನ ನೀಡಿದ ಬೆಂಬಲವನ್ನು ಸೂಚಿಸುತ್ತದೆ. ಮಹಾರಾಷ್ಟ್ರ ಮತ್ತು ಹರಾರ‍ಯಣದ ಜನತೆ ಪ್ರಜಾಪ್ರಭುತ್ವವನ್ನು ಸರಿದಾರಿಗೆ ತರುವ ಯತ್ನ ಮಾಡಿದ್ದಾರೆ ಎಂಬ ವಿಡಿಯೋ ಪೋಸ್ಟ್‌ ಮಾಡಲಾಗಿದೆ. ಈ ವಿಡಿಯೋದಲ್ಲಿ ಜನಸಮೂಹದೊಂದಿಗೆ ಚರ್ಚಿಸುತ್ತಿರುವ ರಾಹುಲ್‌ ಗಾಂಧಿ ಅವರ ಪ್ರಧಾನ ಫೋಟೋಗಳನ್ನೇ ಹಾಕಲಾಗಿದೆ.


ಆದರೆ, ವಾಸ್ತವ ಸ್ಥಿತಿ ಎಂದರೆ, ಹರಿಯಾಣದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಹರಿಯಾಣ ಮಾಜಿ ಸಿಎಂ ಭೂಪಿಂದರ್‌ ಹೂಡಾ, ಹರಿಯಾಣ ಕಾಂಗ್ರೆಸ್‌ ಅಧ್ಯಕ್ಷೆ ಕುಮಾರಿ ಶೆಲ್ಜಾ, ಹಿರಿಯ ನಾಯಕರಾದ ಗುಲಾಂ ನಬೀ ಆಜಾದ್‌, ಅಹ್ಮದ್‌ ಪಟೇಲ್‌ ಸೇರಿದಂತೆ ಇತರ ಹಿರಿಯ ನಾಯಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೆಯೇ, ಮಹಾರಾಷ್ಟ್ರದಲ್ಲಿ ಮಾಜಿ ಸಿಎಂ ಅಶೋಕ್‌ ಚೌಹಾಣ್‌, ಬಾಲಾಸಾಹೇಬ್‌ ಥಾರಟ್‌, ಏಕನಾಥ್‌ ಗಾಯಕ್‌ವಾಡ್‌ ಸೇರಿದಂತೆ ಇತರರು ಪಕ್ಷದ ಗೆಲುವಿಗಾಗಿ ಕೆಲಸ ಮಾಡಿದ್ದಾರೆ.
ವಾಸ್ತವ ಸ್ಥಿತಿ ಹೀಗಿರುವಾಗ ಇದ್ದಕ್ಕಿದ್ದಂತೆ ಎರಡೂ ರಾಜ್ಯಗಳಲ್ಲಿ ಪಕ್ಷದ ಸಣ್ಣ ಯಶಸ್ಸಿಗೆ ರಾಹುಲ್‌ ಗಾಂಧೀ  ಕಾರಣ ಎಂದು ಬಿಂಬಿಸಲು ಹೊರಟಿರುವುದು ಪಕ್ಷದ ಹಿರಿಯ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರು ರಾಜೀನಾಮೆ ನೀಡಿದ್ದರು.


Find Out More:

Related Articles: