ಬಂಗಾರದ ಮೇಲೆ ನಮೋ ಕಣ್ಣು

somashekhar
ನವದೆಹಲಿ: 2016ನವೆಂಬರ್ 08ರಂದು 1000ಮತ್ತು 500ರೂ ಮುಖಬೆಲೆಯ ನೋಟುಗಳನ್ನು ರದ್ದು ಮಾಡುವ ಮೂಲಕ ರಾಷ್ಟ್ರವನ್ನೇ  ಆಶ್ಚರ್ಯಚಿಕಿತಗೊಳಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಇದೇ ಮಾದರಿಯಲ್ಲಿ ಬಂಗಾರದ ಮೇಲೆ ದೊಡ್ಡ ತೆರಿಗೆ ಹೇರುವ ಮೂಲಕ ಸರ್ಜಿಕಲ್ ಸ್ಟ್ರೈಕ್ ಮಾಡಲು ಶುರು ಮಾಡಿದ್ದಾರೆ.  ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿಸಕ್ರಮಗೊಳಿಸಲು ಮುಂದಾಗಿದೆ. ಆದಾಯ ತೆರಿಗೆ ಅಮ್ನೆಸ್ಟಿ ಸ್ಕೀಂ ಮಾದರಿಯಲ್ಲಿ ಕೇಂದ್ರ ಸರ್ಕಾರವು ಗೋಲ್ಡ್ ಅಮ್ನೆಸ್ಟಿ ಸ್ಕೀಮ್ ತರಲಿದೆ.ಈ ಸ್ಕೀಂ ಪ್ರಕಾರ ದಾಖಲೆ ಇಲ್ಲದ ಚಿನ್ನ ಅಕ್ರಮವಾಗಿದ್ದು ಈ ಚಿನ್ನವನ್ನು ಇಂತಿಷ್ಟು ಬೆಲೆ ತೆತ್ತು ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ರಾಷ್ಟ್ರದ ಆರ್ಥಿಕ ವ್ಯವಹಾರಗಳ ಇಲಾಖೆಮತ್ತು ಕಂದಾಯ ಇಲಾಖೆ ಜಂಟಿಯಾಗಿ ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ರೂಪಿಸಿದ್ದು ಆರಂಭದಲ್ಲಿ ಸರ್ಕಾರ ಚಿನ್ನ ಸಂಗ್ರಹಕ್ಕೆ ಒಂದು ಮಿತಿಯನ್ನು ನಿಗದಿ ಪಡಿಸುತ್ತದೆ. ಈ ಪ್ರಮಾಣಕ್ಕಿಂತ ಕಡಿಮೆ ಚಿನ್ನವನ್ನು ಹೊಂದಿದ್ದರೆ ಅದರ ವಿವರವನ್ನು ತೋರಿಸುವ ಅಗತ್ಯವಿಲ್ಲ. ಆದರೆ ಆ ಮಿತಿಗಿಂತ ಜಾಸ್ತಿ ಪ್ರಮಾಣದಲ್ಲಿ ಚಿನ್ನ ಸಂಗ್ರಹ ಇದ್ದರೆ ಮೂಲವನ್ನು ತಿಳಿಸಬೇಕಾಗುತ್ತದೆ. ಆಭರಣ ಖರೀದಿಸಿದ ರಸೀದಿಯನ್ನು ನೀಡಬೇಕಾಗುತ್ತದೆ. ಒಂದು ವೇಳೆ ದಾಖಲೆಯಿಲ್ಲದ ಚಿನ್ನವಿದ್ದರೆ ಅದರ ವಿವರವನ್ನು ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ನಂತರ ಸರ್ಕಾರವೇ ನಿಗದಿಪಡಿಸಿದ ದಂಡವನ್ನು ತೆತ್ತು ಈ ಚಿನ್ನವನ್ನು ಸಕ್ರಮ ಮಾಡಿಕೊಳ್ಳಬೇಕಾಗುತ್ತದೆ.


ಅಕ್ಟೋಬರ್ ಎರಡನೇ ವಾರದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಯ ಬಗ್ಗೆ ನಿರ್ಧಾರ ಪ್ರಕಟವಾಗಬೇಕಿತ್ತು. ಆದರೆ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿಗದಿಯಾಗಿದ್ದರಿಂದ ಕ್ಯಾಬಿನೆಟ್ ಸಭೆಯಲ್ಲಿ ಇದಿದ್ದರಿಂದಸರ್ಕಾರ ಸುಮ್ಮನಾಗಿತ್ತು. ನೋಟುನಿಷೇಧದ ಬಳಿಕ ಹಣಕಾಸು ವ್ಯವಹಾರಗಳಿಗೆ ಕಠಿಣ ನೀತಿಯನ್ನು ತರಲಾಗಿದ್ದು ಬ್ಯಾಂಕಿನಿಂದ ನಗದು ಡ್ರಾ ಮಾಡಲು ಮಿತಿ ಹೇರಲಾಗಿದೆ. ಅಷ್ಟೇ ಅಲ್ಲದೇಆನ್‍ಲೈನ್ ವ್ಯವಹಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ವ್ಯವಹಾರಗಳು ದಾಖಲಾಗುತ್ತದೆ. ಇದರಿಂದ ಪಾರಾಗಲು ಧನಿಕರು ಕೆಜಿಗಟ್ಟಲೇ ಚಿನ್ನ ಸಂಗ್ರಹಿಸಿದ್ದಾರೆ  ಎಂಬುದರಿಂದ ಈ ಸರ್ಜಿಕಲ್ ಸ್ಟ್ರೈಕ್ ನಡೆಸಲು ನಮೋ ಸಿದ್ದರಾಗಿದ್ದಾರೆ.




Find Out More:

Related Articles: