ಆರೋಗ್ಯ ಸಚಿವ ಶ್ರೀರಾಮುಲು ರಾಜೀನಾಮೆ!?

frame ಆರೋಗ್ಯ ಸಚಿವ ಶ್ರೀರಾಮುಲು ರಾಜೀನಾಮೆ!?

somashekhar
ಹರಿಹರ: ಆರೋಗ್ಯ ಸಚಿವ ಶ್ರೀರಾಮುಲು ರಾಜೀನಾಮೆ ವಿಚಾರ ಕೇವಲ ಗಾಸಿಪ್ ಗಳಲ್ಲಿ. ಸ್ವತಹ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ಮೊಲದನಿಂದಲೂ ಡಿ. ಸಿ. ಎಂ ಹುದ್ದೆಗಾಗಿ ಪಟ್ಟು ಹಿಡಿದಿದ್ದ ರಾಮುಲುಗೆ ಡಿಸಿಎಂ ಸ್ಥಾನ ಕೈತಪ್ಪಿ ಕೊನೆಗೆ ಆರೋಗ್ಯ ಸಚಿವ ಸ್ಥಾನ ಸಿಕ್ಕಿತು. ಕೊನೆಗೆ ಇದೀಗ ಈ ಬೇಡಿಕೆ ಯಾದರೂ ಈಡೇರಿಸಲೇ ಬೇಕು ಇಲ್ಲವಾದಲ್ಲಿ ಏನಾಗುತ್ತದೆ ಎಂದು ಹೇಳಲು ಸಹ ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 

ಆರೋಗ್ಯ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಅವರ ಮುಂದೆ ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ ರಾಜಕೀಯ ನಿವೃತ್ತಿ ಹೇಳಿವುದಾಗಿ ತಮ್ಮ ಬೆಂಬಲಿಗರಿಗೆ ಹೇಳಿದ್ದ ರಾಮುಲು ಇಂದು ಸರ್ಕಾರದಿಂದ ಹೊರಬರುವ ಎಚ್ಚರಿಕೆ ನೀಡಿದ್ದಾರೆ. ಅದೇನೆಂದರೆ ಇನ್ನೆರಡು ತಿಂಗಳಲ್ಲಿ ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ಮೀಸಲಾತಿ ನೀಡಿ. ಮೀಸಲಾತಿ ಸಿಗಲ್ಲ ಅಂದ್ರೆ ನನಗೆ ಏನೂ ಬೇಡ ಎಂದು  ಸಚಿವ ಶ್ರೀರಾಮಲು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ  ಮಠದಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡಬೇಕು. ಇನ್ನೆರಡು ತಿಂಗಳಲ್ಲಿ ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಬೆಂಗಳೂರಿನವರೆಗೂ ಪಾದಯಾತ್ರೆ ‌ಮಾಡಿದ್ದಾರೆ. ಹಿಂದಿನ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ಮಾಡಿದೆ. ಬಿಜೆಪಿ ಸರ್ಕಾರ ಬಂದ ಬಳಿಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಗೆ ಒಪ್ಪಿಗೆ ನೀಡಿದೆ. ಜೊತೆಗೆ ಎರಡು ತಿಂಗಳಲ್ಲಿ ವರದಿ ಬರಲಿದೆ. ವರದಿ ಬಂದ ತಕ್ಷಣಕ್ಕೆ ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದ ಗುಡುಗಿದ್ದಾರೆ. 

ಶ್ರೀರಾಮುಲು ಟ್ವೀಟ್ ಆಗಿದೆ ನೋಡಿ.  ವಾಲ್ಮೀಕಿ ನಾಯಕ ಸಮುದಾಯವನ್ನು ಒಂದೆಡೆ ಸೇರಿಸಿ ಸಾಂಸ್ಕೃತಿಕವಾಗಿ ಎಚ್ಚರಿಸುವ ಚಿಂತನೆಯೊಂದಿಗೆ ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ವಾಲ್ಮೀಕಿ ಮಠದ ವತಿಯಿಂದ ಪ್ರತಿ ವರ್ಷದ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಹಮ್ಮಿಕೊಳ್ಳಲಾಗುತ್ತದೆ.


Find Out More:

Related Articles:

Unable to Load More