ಸಿದ್ದರಾಮಯ್ಯ ರಾಜೀನಾಮೆ ನೀಡಲು ಇದೇ ನೋಡಿ ಕಾರಣ

Soma shekhar
ಬೆಂಗಳೂರು:  ರಾಜ್ಯ ರಾಜಕೀಯದಲ್ಲಿ 5 ವರ್ಷಗಳ ಸಂಪೂರ್ಣ ಅವಧಿ ಮುಖ್ಯಮಂತ್ರಿ ಆಗಿ ಮೆರೆದ ಟಗರು, ಕಾಂಗ್ರೆಸ್ ಪಕ್ಷದ ಕೆಚ್ಚೆದೆಯ ನಾಯಕ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಯಾಕೆ ಗೊತ್ತಾ!  ಉಪ ಚುನಾವಣೆಯ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು  ಸಿಎಲ್‍ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು. ಆದರೆ ಇಂದು ನನ್ನ ನಿರೀಕ್ಷೆ ಹುಸಿಯಾಗಿದೆ, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೆನೆ. ವಿಪಕ್ಷ ನಾಯಕನಾಗಿ ಮುಂದುವರಿಯುತ್ತಿದ್ದೆನೆ. ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದರು. 15 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೇವಲ ಎರಡು ಸ್ಥಾನದಲ್ಲಿ ಮಾತ್ರ ಜಯ ಗಳಿಸುವಲ್ಲಿ ಯಶಸ್ವಿಯಾದ ಹಿನ್ನಲೆಯಲ್ಲಿ ನೈತಿಕ ಹೊಣೆ ಹೊತ್ತು ಸಿ.ಎಲ್ .ಪಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ.
 
15 ಕ್ಷೇತ್ರಗಳಲ್ಲಿಯೂ ಸಿದ್ದರಾಮಯ್ಯನವರು ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಟಿಕೆಟ್ ಕೊಡಿಸಿದ್ದ 13 ಜನರನ್ನು ಗೆಲ್ಲಿಸುವಲ್ಲಿ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಯಾವುದೇ ಚರ್ಚೆ ನಡೆಸದೇ ಸಿದ್ದರಾಮಯ್ಯನವರು ಆಪ್ತರಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಮುನಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕರು ಚುನಾವಣೆ ಪ್ರಚಾರದಿಂದ ದೂರವೇ ಉಳಿದುಕೊಂಡಿದ್ದರು. ಮೈತ್ರಿ ಸರ್ಕಾರ ಪತನದ ಬಳಿಕ ಸಿದ್ದರಾಮಯ್ಯನವರ ನಾಯಕತ್ವದ ಬಗ್ಗೆ ಮೂಲ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗೆ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ಎಂಬ ಎರಡು ಬಣಗಳು ರಾಜ್ಯ ಕೈಕೂಟದಲ್ಲಿ ಹುಟ್ಟುಕೊಂಡಿದ್ದವು. ಆಂತರಿಕ ಕಲಹ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಏಕಾಂಗಿಯಾಗಿ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಮತಯಾಚಿದ್ದರು. ಆದರೆ 15 ಕ್ಷೇತ್ರದಲ್ಲಿ 2 ಕ್ಷೇತ್ರವಷ್ಟೇ ಗೆಲ್ಲಲು ಶಕ್ತರಾದರು. ಪಕ್ಷದಲ್ಲಿ ಆಂತರಿಕ ಸಮಸ್ಯೆ ಮತ್ತು ಸಂಘಟನೆಯ ಕೊರತೆಯೇ ಇದಕ್ಕೆ ಕಾರಣವೆಂದು ತಿಳಿದುಬಂದಿದೆ.

Find Out More:

Related Articles: