ಹುಬ್ಬಳ್ಳಿ: ಸಂಸದರಾಗಿರುವ ಅನಂತ್ ಕುಮಾರ್ ಹೆಗಡೆ ನಾಚಿಕೆ, ಮಾನ- ಮರ್ಯಾದೆ ಇಲ್ಲದವರು. ಸ್ವಾತಂತ್ರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತಾನಾಡೋದು ಸರಿಯಲ್ಲ. ಸ್ವಾತಂತ್ರ್ಯ ಹೋರಾಟಗಾರರು ಜೈಲಲ್ಲಿದ್ದು, ಪ್ರಾಣ ಕಳೆದುಕೊಂಡು ನಮಗೆ ಸ್ವಾತಂತ್ರ್ಯ ಕೊಡಿಸಿದ್ದಾರೆ ಅವರ ಬಗ್ಗೆ ಇವರಿಗೇನು ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಗಳು ಗುಡುಗಿದ್ದಾರೆ.
ಅನಂತ್ ಕುಮಾರ್ ಹೆಗಡೆಗೆ ನಾಚಿಕೆ ಮಾನ ಮರ್ಯಾದೆ ಇಲ್ಲವೆಂದು ಗುಡುಗಿರುವುದು ಬೇರಾರು ಅಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಹೌದು, ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಎಂದು ಹೇಳಿಕೊಳ್ಳುತ್ತಿರುವವರು ಮತ್ತು ಪ್ರಗತಿಪರರು ಎಡಬಿಡಂಗಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮತ್ತೆ ಹುಬ್ಬಳ್ಳಿಯಲ್ಲಿ ಹರಿಹಾಯ್ದಿದ್ದಾರೆ. ಗಾಂಧೀಜಿ, ನೆಹರು, ವಲ್ಲಭಬಾಯಿ ಪಟೇಲ್ ಜೊತೆಗೆ ಅನಂತ ಕುಮಾರ್ ಹೆಗಡೆ ಕೂಡ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದರು. ಅದರಿಂದಲೇ ಅವರು ಅಷ್ಟು ಕರಾರುವಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸ್ವಾತಂತ್ರ್ಯಕ್ಕೋಸ್ಕರ ಹೋರಾಟ ನಡೆಸಿರುವ ಅನಂತ್ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಸತ್ಯಾಂಶವೂ ಇರಬಹುದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ನಂತರ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಅನಂತ್ ಕುಮಾರ್ ಹೆಗಡೆ ನಾಚಿಕೆ, ಮಾನ- ಮರ್ಯಾದೆ ಇಲ್ಲದವರು. ಕೇಂದ್ರ ಸರ್ಕಾರವೇ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ. ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದರೂ ಕೇಂದ್ರದ ಮಂತ್ರಿಯಾಗಿದ್ದರು. ಸ್ವತಂತ್ರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತಾನಾಡೋದು ಸರಿಯಲ್ಲ. ಸ್ವಾತಂತ್ರ್ಯ ಹೋರಾಟಗಾರರು ಜೈಲಲ್ಲಿದ್ದು, ಪ್ರಾಣ ಕಳೆದುಕೊಂಡು, ಕುಟುಂಬ ತ್ಯಜಿಸಿ ನಮಗೆ ಸ್ವಾತಂತ್ರ್ಯ ಕೊಡಿಸಿದ್ದಾರೆ. ಅವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದು ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.
ಇದಕ್ಕೆ ಪ್ರತಿಯಾಗಿ ಸೋಮವಾರ ಟ್ವೀಟ್ ಮಾಡಿರುವ ಅನಂತ್ ಕುಮಾರ್ ಹೆಗಡೆ, ಸಿಎಎ ಬಗ್ಗೆ ಹುಟ್ಟಿನ ದಾಖಲೆ ನೀಡಲು ಆಗುವುದಿಲ್ಲ ಎಂದ ಸಿದ್ದರಾಮಯ್ಯ ಈಗ ತನ್ನೆಲ್ಲ ದಾಖಲೆಗಳನ್ನು ಸರಿ ಮಾಡಿಕೊಂಡು ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಕ್ರಮ ಸಾರ್ಥಕವಾಯಿತು ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.