ಬೇರೆ ಜಿಲ್ಲೆಗಳ ಕೂಲಿ ಕಾರ್ಮಿಕರಿಗೆ ಆಶ್ರಯ ನೀಡಲು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆರಿಸಿಕೊಂಡ ಸ್ಥಳಗಳು ಯಾವುದು ಗೊತ್ತಾ?

frame ಬೇರೆ ಜಿಲ್ಲೆಗಳ ಕೂಲಿ ಕಾರ್ಮಿಕರಿಗೆ ಆಶ್ರಯ ನೀಡಲು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆರಿಸಿಕೊಂಡ ಸ್ಥಳಗಳು ಯಾವುದು ಗೊತ್ತಾ?

Soma shekhar

ಬೆಂಗಳೂರು: ದಿನದಿಂದ ದಿನಕ್ಕೆ ಕೊರೋನಾ ವೈರಸ್‌ನ ಹರಡುವಿಕೆ ಹೆಚ್ಚುತ್ತಿರುವುದರಿಂದ ಮಾನ್ಯ ಪ್ರಧಾನ ಮಂತ್ರಿಗಳು ಎಲ್ಲಾ ರಾಜ್ಯಗಳ ಗಡಿಯನ್ನು ಬಂದ್ ಮಾಡುವಂತೆ ಆದೇಶವನ್ನು ಹೊಡಿಸಲಾಗಿದೆ ಇದರಿಂದ ದೇಶದ ವಿವಿಧ ಭಾಗಗಳಲ್ಲಿನ ದಿನಗೂಲಿ ಕಾರ್ಮಿಕರು ನಿಜವಾಗಿಯೂ ಕೂಡ ನಿರ್ಗತಿಕರಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಸೂಕ್ತ ಮಾರ್ಗವನ್ನು ಹುಡುಕಿಕೊಂಡಿದೆ ಅಷ್ಟಕ್ಕೂ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಆ ಕ್ರಮ ಯಾವುದು ಗೊತ್ತಾ?

 

ಕೊರೋನಾ ವೈರಸ್ ನಿಂದಾಗಿ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತವರು ಜಿಲ್ಲೆಗಳಿಗೆ ತೆರಳಲು ಹವಣಿಸುತ್ತಿರುವ ಎಲ್ಲ ವಲಸೆ ಕಾರ್ಮಿಕರನ್ನು ಮದುವೆ ಮಂಟಪಗಳಿಗೆ ರವಾನೆ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

 

ಬೆಂಗಳೂರು ನಗರದಿಂದ ಇತರೆ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಲಸೆ ಕಾರ್ಮಿಕರ ಓಡಾಟ ಹೆಚ್ಚಾಗಿದ್ದು, ಕಾರ್ಮಿಕರಲ್ಲಿ ಸೋಂಕು ಪ್ರಸರಣದ ಭೀತಿ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರನ್ನು ಸಮೀಪದ ಕಲ್ಯಾಣ ಮಂಟಪಗಳಿಗೆ ರವಾನೆ ಮಾಡುವಂತೆ ಭಾಸ್ಕರ್ ರಾವ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ ಈ ಕುರಿತಂತೆ ನಗರದ ಎಲ್ಲ ಪೊಲೀಸ್ ಠಾಣೆಗಳಿಗೆ ವೈರ್ ಲೆಸ್ ಸಂದೇಶ ರವಾನಿಸಿರುವ ಭಾಸ್ಕರ್ ರಾವ್ ಅವರು, ಸರ್ಕಾರದ ಆದೇಶದ ಮೇರೆಗೆ ನಗರದಲ್ಲಿ ಕಲ್ಯಾಣ ಮಂಟಪಗಳನ್ನು ಬುಕ್ ಮಾಡಲಾಗಿದ್ದು, ವಲಸೆ ಕಾರ್ಮಿಕರನ್ನು ಲಾಕ್ ಡೌನ್ ಮುಗಿಯುವವರೆಗೂ ಇಲ್ಲಿಯೇ ಉಳಿಯುವಂತೆ ಮಾಡಬೇಕು. ಕಲ್ಯಾಣ ಮಂಟಪಗಳಲ್ಲಿ ಇದಕ್ಕಾಗಿ ಎಲ್ಲ ಸಿದ್ಧತೆ ನಡೆಸಲಾಗಿದೆ. ಅವರ ಆಹಾರ, ಉಳಿದುಕೊಳ್ಳುವ ವ್ಯವಸ್ಥೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಗೆ ವೈದ್ಯರ ನೇಮಕ ಕೂಡ ಆಗಿದೆ ಎಂದು ಹೇಳಿದರು.

 

’ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ, ಇದುವರೆಗೂ ಜಪ್ತಿ ಮಾಡಿರುವ ವಾಹನಗಳನ್ನು ಬಿಡುಗಡೆ ಮಾಡಿ. ನಾಳೆಯಿಂದ (ಸೋಮವಾರ) ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಜಪ್ತಿ ಮಾಡಿ. ಆ ವಾಹನಗಳನ್ನು ಲಾಕ್ಡೌನ್ ಮುಗಿಯುವವರೆಗೂ ಬಿಡಬೇಡಿ ಎಂದು ಹೇಳಿದರು. ಇದೇ ವೇಳೆ ಲಾಕ್ ಡೌನ್ ನಿಮಿತ್ತ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ ಕೆಲಸವನ್ನು ಶ್ಲಾಘಿಸಿರುವ ಕಮಿಷನರ್ ಭಾಸ್ಕರ್ ರಾವ್ ಅವರು, ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು, ಇದೇ ವೇಳೆ ’ಕೆಲ ಮಾಧ್ಯಮ ಮಿತ್ರರು ಕಚೇರಿ ಕೆಲಸದ ನಿಮಿತ್ತ ಹೊರಗಡೆ ಓಡಾಡುವ ಸಂದರ್ಭದಲ್ಲಿ ಪೋಲೀಸರಿಂದ ಅನಗತ್ಯವಾಗಿ ಕಿರುಕುಳ ಉಂಟಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಮಾಧ್ಯಮದವರು ಕಚೇರಿಯ ಗುರುತಿನ ಚೀಟಿ ತೋರಿಸಿದರೆ ಅದನ್ನು ಮಾನ್ಯ ಮಾಡಬೇಕು. ಯಾವುದೇ ರೀತಿಯಲ್ಲೂ ಕಿರುಕುಳ ನೀಡಬಾರದು. ಆ ರೀತಿ ದೂರುಗಳು ಕೇಳಿಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಕಮಿಷನರ್ ಭಾಸ್ಕರ್ ರಾವ್ ಪೊಲೀಸರಿಗೆ ತಿಳಿಸಿದ್ದಾರೆ.

Find Out More:

Related Articles: