ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಈ ಭಾಷಣದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಘೋಷಿಸುವರಾ..?

Soma shekhar

ಕರೋನಾ ಬಿಕ್ಕಟ್ಟು ಮತ್ತು ಲಾಕ್ ಡೌನ್ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೊಮ್ಮೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ದೇಶವನ್ನು ಸಂಬೋಧಿಸಲಿದ್ದು, ಕರೋನಾ ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮತ್ತಷ್ಟು ಸದಿಲಿಕೆಯೊಂದಿಗೆ ಅವರು ಲಾಕ್ ಡೌನ್ 4.0 ಕುರಿತು ಹೇಳಿಕೆ ನೀಡುವ ಸಾಧ್ಯತೆ ಕೂಡ ಇದೆ ಎಂದು ವರ್ತಿಸಲಾಗುತ್ತಿದೆ.

 

ಪ್ರಧಾನಿ ಮೋದಿ ಇಂದು ತಮ್ಮ ಸಂಬೋಧನೆಯ ವೇಳೆ ಮತ್ತಷ್ಟು ಸಡಿಲಿಕೆಗಳ ಜೊತೆಗೆ ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ ಹಂತ ಹಂತವಾಗಿ ಲಾಕ್ ಡೌನ್ ನಿಂದ ಹೇಗೆ ನಿರ್ಗಮಿಸಲಾಗುವುದು ಎಂಬುದರ ಕುರಿತು ಕೂಡ ಪ್ರಧಾನಿ ತಮ್ಮ ಯೋಜನೆಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಜನರಿಗೆ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಕುರಿತು ಮನವಿ ಕೂಡ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ನಿನ್ನೆ ರಾಜ್ಯದ ಮುಖ್ಯಮಂತ್ರಿಗಳ ಕುರಿತು ಚರ್ಚೆ ನಡೆಸಿದ್ದ ಪ್ರಧಾನಿ ಮೋದಿ


ಕೊರೊನಾ ಪ್ರಕೋಪದ ಹಿನ್ನೆಲೆ ಘೋಷಿಸಲಾಗಿರುವ ಲಾಕ್‌ಡೌನ್‌ನ ಮೂರನೇ ಹಂತ ಮೇ 17 ರಂದು ಅಂತ್ಯವಾಗುತ್ತಿದ್ದು, ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರೋನಾ ಮತ್ತು ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಸಮಯದಲ್ಲಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ಅನ್ನು ಹೆಚ್ಚಿಸಲು ಸಲಹೆ ನೀಡಿದ್ದಾರೆ ಎಂದೂ ಕೂಡ ಹೇಳಲಾಗುತ್ತಿದೆ.

 

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಂದ ಸಲಹೆ ಪಡೆದ ಪ್ರಧಾನಿ ಮೋದಿ
ನಿನ್ನೆ ನಡೆಸಲಾಗಿರುವ ಸಭೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತನಾಡಲು ಸಾಕಷ್ಟು ಕಾಲಾವಕಾಶ ನೀಡಲಾಗಿರುವುದು ಇಲ್ಲಿ ವಿಶೇಷ. ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಆರಂಭವಾದ ಈ ಸಭೆಯನ್ನು ಒಟ್ಟು ಎರಡು ಹಂತಗಳಲ್ಲಿ ನಡೆಸಲಾಗಿದೆ. ಈ ವೇಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವಾರು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಮೊದಲಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದರು.

ದೇಶಾದ್ಯಂತ 70 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ


ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇಂದು ಒಟ್ಟು 3,604 ಹೊಸ ಪ್ರಕರಣಗಳು ವರದಿಯಾಗಿವೆ. ಆದರೂ ಸಹ ನಿನ್ನೆಗೆ ಹೋಲಿಸಿದರೆ, ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ನಿನ್ನೆ ನಾಲ್ಕು ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗಿದ್ದವು. ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, ಇದುವರೆಗೆ 70 ಸಾವಿರ 756 ಜನರು ಸೋಂಕಿಗೆ ಒಳಗಾಗಿದ್ದಾರೆ. ಇದೇ ವೇಳೆ 2293 ಜನರು ಈ ಮಾರಕ ಕಾಯಿಲೆಗೆ ಬಲಿಯಾಗಿದ್ದರೆ, 22 ಸಾವಿರ 455 ಜನರು ಚೇತರಿಸಿಕೊಂಡಿದ್ದಾರೆ.

 

Find Out More:

Related Articles: