ನಿರ್ಮಲಾ ಸೀತಾರಾಮ್ ಅವರ ಇಂದಿನ ನಾಲ್ಕನೇ ಸುದ್ದಿಗೋಷ್ಟಿಯಲ್ಲಿ ಏನನ್ನು ಘೋಷಿಸಲಿದ್ದಾರೆ..?

Soma shekhar

ನಾಲ್ಕನೇ ಸುದ್ದಿಗೋಷ್ಠಿಯಲ್ಲಿ 20ಲಕ್ಷ ಕೋಟಿ ಅನುದಾನದ ನಾಲ್ಕನೇ ಭಾಗದ ಘೋಷಣೆ ಮಾಡಿದ್ದಾರೆ. ಸೀತಾರಾಮನ್ ಅವರು ಸುದ್ದಿಗೋಷ್ಠಿಯಲ್ಲಿ ಅನುದಾನದ ಕುರಿತು ಎಲ್ಲಾ ಮಾಹಿತಿಯನ್ನು ನೀಡಿದ್ದರು. ಎರಡು ಹಾಗೂ ಮೂರನೇ ಸುದ್ದಿಗೋಷ್ಠಿಯಲ್ಲಿ ಆರ್ಥಿಕ ಅನುದಾನದ ಘೋಷಣೆ ಮಾಡಿದ್ದರು  ಇಂದೂ ಕೂಡ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು 4 ಗಂಟೆಗೆ 4ನೇ ಸುದ್ದಿಗೋಷ್ಠಿ ನಡೆಸಲಿದ್ದಾರೆ.

 

ಕೊರೋನಾ ವೈರಸ್ ಲಾಕ್ ಡೌನ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ನ ಮೂರನೇ ಹಂತದ ಘೋಷಣೆಗಳ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡುತ್ತಿದ್ದು, ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಶುಕ್ರವಾರ ತಿಳಿಸಿದ್ದಾರೆ.

 

ಇದೇ ವೇಳೆ ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ ಮೀಸಲಿಡುವುದಾಗಿ ಹೇಳಿದ ನಿರ್ಮಲಾ ಸೀತಾರಾಮನ್ ಅವರು, ಈ ಪೈಕಿ ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಿ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ 10 ಸಾವಿರ ಕೋಟಿ ರೂಪಾಯಿ ಮೀಸಲು. ಕ್ಲಸ್ಟರ್ ಅಧಾರಿತ ಕೃಷಿಗೆ 10 ಸಾವಿರ ಕೋಟಿ ರೂಪಾಯಿ ಮತ್ತು ಆಯುರ್ವೇದ ಉತ್ಪನ್ನಗಳ ಸಾಗಾಟಕ್ಕೂ ಹಣ ಮೀಸಲಿಡಲಾಗಿದೆ ಎಂದು ಹೇಳಿದರು. ಇದಲ್ಲದೆ ಎಲ್ಲಾ ದೇಶೀಯ ಆಹಾರ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಗೆ ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದರು.

 

ಆರ್ಥಿಕ ಪ್ಯಾಕೇಜ್ ನ ಮೂರನೇ ಕಂತಿನಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಿಗೆ ಆದ್ಯತೆ ನೀಡಲಾಗಿದೆ. ಕೃಷಿಗೆ ಸಂಬಂಧಿಸಿದಂತೆ ಇಂದು 11 ಘೋಷಣೆಗಳನ್ನು ಮಾಡಲಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ ಫಸಲ್ ಬಿಮಾ ಯೋಜನೆ ಅಡಿ ರೈತರಿಗೆ 6400 ಕೋಟಿ ರೂಪಾಯಿ ನೀಡಿದ್ದೇವೆ. ಕಳೆದ ಎರಡು ತಿಂಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರಿಗೆ 18,700 ಕೋಟಿ ಹಣ ವರ್ಗಾವಣೆ ಮಾಡಿದ್ದೇವೆ.

 

ಕಳೆದ ಎರಡು ತಿಂಗಳಲ್ಲಿ ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಿ ಉತ್ಪನ್ನ ಖರೀದಿ ಮಾಡಿದ್ದೇವೆ. ಇದಕ್ಕಾಗಿ 74,300 ಕೋಟಿ ರೂಪಾಯಿ ಹಣಕಾಸಿನ ನೆರವು ನೀಡಲಾಗಿದೆ ಎಂದು ಹೇಳಿದರು.

 

ಕೊರೋನಾ ವೈರಸ್ ಲಾಕ್ ಡೌನ್ ಅವಧಿಯಲ್ಲಿ ಹಾಲಿಗೆ ಬೇಡಿಕೆ ಶೇ 20-25ರಷ್ಟು ಕಡಿಮೆಯಾಗಿದೆ. ಹಾಲು ಉತ್ಪಾದಕರಿಗೆ ಸಾಲದ ಮೇಲಿನ ಬಡ್ಡಿಯಲ್ಲಿ ಸರ್ಕಾರದಿಂದ ಶೇ 2ರಷ್ಟು ಪಾವತಿ ಮಾಡುವ ಹೊಸ ಯೋಜನೆ. 2020-21 ಹಣಕಾಸು ವರ್ಷಕ್ಕೆ ಅನ್ವಯವಾಗುತ್ತದೆ. ಇದರಿಂದಾಗಿ 2 ಕೋಟಿ ರೈತರಿಗೆ ಉಪಯೋಗವಾಗಲಿದ್ದು, 5,000 ಕೋಟಿ ರೂ ಹೆಚ್ಚುವರಿ ನಗದು ಹೊರಬರಲಿದೆ. ಹೈನುಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ 15,000 ಕೋಟಿ ರೂ ಮೀಸಲಿಟ್ಟಿದ್ದು, ಲಾಕ್‌ಡೌನ್‌ ಅವಧಿಯಲ್ಲಿ ಕನಿಷ್ಠ ಬೆಂಬಲ ಬೆಲೆಗಾಗಿ ರೂ74,300 ಕೋಟಿಗಳು ಮೀಸಲಿಡಲಾಗಿದೆ.

 

Find Out More:

Related Articles: