ಇಡೀ ವಿಶ್ವದಲ್ಲಿ ಕೊರೋನಾ ಸೋಂಕಿನಿಂದ ಮುಕ್ತವಾದವರ ಸಂಖ್ಯೆ ಎಷ್ಟು ಗೊತ್ತಾ..?
ಕೊರೋನಾ ಸೋಂಕಿನಿಂದಾಗಿ ಇಡೀ ಪ್ರಪಂಚವೇ ಭಯದ ನಡುವೆ ಬದುಕಬೇಕಾದಂತಹ ಪರಿಸ್ಥಿತಿ ಬಂದೋದಗಿದೆ. ಈ ಕೊರೋನಾ ವೈರಸ್ ಇಂದಾಗಿ ಈಗಾಗಲೆ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದು ಇನ್ನು ಅನೇಕ ಮಂದಿ ಸಾವನ್ನಪ್ಪುತ್ತಿದ್ದಾರೆ, ಅಷ್ಟೇ ಪ್ರಮಾಣದಲ್ಲಿ ಕೊರೋನಾ ಸೋಂಕಿನಿಂದ ಮುಕ್ತಿಯನ್ನೂ ಕೂಡ ಹೊಂದುತ್ತಿದ್ದಾರೆ. ಅಷ್ಟಕ್ಕೂ ಇಡೀ ವಿಶ್ವದಲ್ಲಿ ಕೊರೋನಾಸೋಂಕಿನಿಂದ ಪಾರಾದವರ ಸಂಖ್ಯೆ ಎಷ್ಟು ಗೊತ್ತಾ..?
ಅಗೋಚರ ವೈರಾಣು ದಾಳಿಯಿಂದ ವಿಶ್ವ ಕಂಗಾಲಾಗಿದ್ದು, ಹೆಮ್ಮಾರಿ ಪಿಡುಗಿಗೆ ಸಾವಿನ ಸಂಖ್ಯೆ 4 ಲಕ್ಷ 8 ಸಾವಿರ ಹಾಗೂ ಸೋಂಕಿತರ ಸಂಖ್ಯೆ 72 ಲಕ್ಷ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ 35.38 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ.
ಡೆಡ್ಲಿ ಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ಜಗತ್ತಿನಾದ್ಯಂತ ಈವರೆಗೆ 4,08,767 ಮಂದಿ ಸಾವಿಗೀಡಾಗಿದ್ದು, 72,00,739 ಸೋಂಕು ಪ್ರಕರಣಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 32.54 ಲಕ್ಷಕ್ಕೇರಿದೆ. ಅಲ್ಲದೆ, ಇನ್ನೂ 53,801 ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.ನಾಳೆ ವೇಳೆಗೆ ಸಾವಿನ ಸಂಖ್ಯೆ 4.12 ಲಕ್ಷ ಮತ್ತು ಗೋಗಿಗಳ ಪ್ರಮಾಣ 74 ಲಕ್ಷ ದಾಟುವ ಆತಂಕವಿದೆ.
ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ.. ವಿಶ್ವದಲ್ಲಿ ಈವರೆಗೆ 35,37,829 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ. ಅಮೆರಿಕ, ಬ್ರೆಜಿಲ್, ರಷ್ಯಾ, ಇಂಗ್ಲೆಂಡ್ ಮತ್ತು ಭಾರತ - ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ
ಭಾರೀ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಲ್ಲಿ ಸ್ಪೇನ್, ಇಟಲಿ, ಫ್ರಾನ್ಸ್, ಜರ್ಮನಿ, ಮತ್ತು ಟರ್ಕಿ ದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವು ಪಟ್ಟಿಯಲ್ಲಿ ಈ ಹಿಂದೆ 9ನೇ ಸ್ಥಾನದಲ್ಲಿದ್ದ ಭಾರತ ಈಗ ಸ್ಪೇನ್‍ನನ್ನು ಹಿಂದಿಕ್ಕೆ ಐದನೇ ಸ್ಥಾನದಲ್ಲಿದೆ. ಏಷ್ಯಾ ಖಂಡದಲ್ಲಿ ಚೀನಾ, ದಕ್ಷಿಣ ಕೊರಿಯಾ, ಪಾಕಿಸ್ತಾನ ಸೇರಿದಂತೆ ಅನೇಕ ದೇಶಗಳಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೊರೊನಾ ವೈರಸ್ ಕೇಂದ್ರ ಬಿಂದು ಚೀನಾದ ವುಹಾನ್ ನಗರದಲ್ಲಿಯೂ ಹೊಸ ಪಾಸಿಟಿವ್ ಕೇಸ್‍ಗಳು ಕಂಡುಬರುತ್ತಿವೆ.
ಅಮೆರಿಕ, ಯುರೋಫ್, ಆಫ್ರಿಕಾ ಖಂಡಗಳ ಅನೇಕ ರಾಷ್ಟ್ರಗಳೂ ಕೂಡ ವೈರಸ್ ಹಾವಳಿಯಿಂದ ಕಂಗೆಟ್ಟಿವೆ. ಕೆಲವು ದೇಶಗಳಲ್ಲಿ ಸೋಂಕು ಮತ್ತು ಸಾವಿನ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾಗಿದೆ. ನ್ಯೂಜಿಲೆಂಡ್ ಕಿಲ್ಲರ್ ಕೊರೊನಾ ಸೋಂಕಿನಿಂದ ಸಂಪೂರ್ಣ ಮುಕ್ತವಾಗಿದೆ.