ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಶಿಕ್ಷಣ ಸಚಿವರು ಏನು ಹೇಳಿದ್ದಾರೆ ಗೊತ್ತಾ..?

Soma shekhar

ಕೊರೋನಾ ವೈರಸ್ ಭೀತಿಯಿಂದಾಗಿ ರಾಜ್ಯದಲ್ಲಿನ  ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು, ಆದರೆ ಈಗ ಮತ್ತೆ ಶಾಲೆ ಕಾಲೇಜುಗಳನ್ನು ತೆರೆಯುವುದರ ಬಗ್ಗೆ ಚರ್ಚೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಅಕ್ಟೋಬರ್  ಅಥವಾ ಸೆಪ್ಟೆಂಬರ್  ಇಂದ  ಶಾಲಾ ಕಾಲೇಜುಗಳನ್ನು ಆರಂಭಿಸಲಾಗುವುದು  ಎಂದು ಹೇಳಲಾಗುತ್ತಿತ್ತು ಆದರೆ  ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್  ಶೈಕ್ಷಣಿಕ ವರ್ಷವನ್ನು ಆರಂಭಿಸುವ  ಬಗ್ಗೆ ಸ್ಪಷ್ಟಣೆಯನ್ನು ನೀಡಿದ್ದಾರೆ.  

 

ಮುಂದಿನ ಶೈಕ್ಷಣಿಕ ವರ್ಷ‌ವನ್ನು ಯಾವಾಗ ಆರಂಭ ಮಾಡಬೇಕು ಎಂಬ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ಮಾಡಿಲ್ಲ 'ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಶಾಲೆ ಪುನರಾರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯ ಸಂಗ್ರಹಿಸುವ ಪ‍್ರಕ್ರಿಯೆ ನಡೆಯುತ್ತಿದೆ. ಶನಿವಾರದವರೆಗೂ ಇದು ಮುಂದುವರಿಯಲಿದೆ. ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಶುಕ್ರವಾರ ಸ್ಪಷ್ಟಪಡಿಸಿದರು.

 

ಈ ವರ್ಷ ಶೂನ್ಯ ತರಗತಿ ಇರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, 'ಆ ರೀತಿ ಯಾರು ಹೇಳಿದ್ದಾರೆ ಎಂಬುದನ್ನು ತಿಳಿಸಿ, ಇಲಾಖೆ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ'. ಬೆಂಗಳೂರಿನಲ್ಲಿ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳಿಗೆ ಕೋವಿಡ್‌-19 ದೃಢಪಟ್ಟಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸುರೇಶ್‌ ಕುಮಾರ್‌ ಅವರು, 'ರೋಗ ಲಕ್ಷಣ ಇದ್ದ ವಿದ್ಯಾರ್ಥಿಗಳಿಗೆಲ್ಲ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ರೋಗ ಲಕ್ಷಣ ಇಲ್ಲದಿದ್ದರೂ ಸೋಂಕು ತಗುಲಿರುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಏನೂ ಮಾಡುವುದಕ್ಕಾಗುವುದಿಲ್ಲ. ಈ ಬಗ್ಗೆ ಪರಿಶೀಲಿಸುತ್ತೇನೆ. ಒಂದು ವೇಳೆ ದೃಢಪಟ್ಟಿದ್ದೇ ಆದರೆ, ಅಗತ್ಯ ಕ್ರಮ ಕೈಗೊಳ್ಳುತ್ತೇನೆ' ಎಂದರು.

 

ಪ್ಲಾಸ್ಮಾ ಚಿಕಿತ್ಸೆ ವಿಸ್ತರಣೆ: 'ಬೆಂಗಳೂರಿನ ವಿಕ್ಟೋರಿಯಾ ಹಾಗೂ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕೋವಿಡ್‌-19 ರೋಗಿಗೆ ನೀಡಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ಸು ಕಂಡಿದೆ. ರಾಜ್ಯದ ಬೇರೆ ಭಾಗಗಳಿಗೂ ಇದನ್ನು ವಿಸ್ತರಿಸಲು ಚಿಂತನೆ ನಡೆದಿದೆ. ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು' ಎಂದರು.

 

ಸಾವಿನ ಪ್ರಮಾಣ: 'ಕೋವಿಡ್‌ನಿಂದಾಗಿ ಬೆಂಗಳೂರಿನಲ್ಲಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಸದ್ಯ ಶೇ 1.4 ಇದೆ. ಈ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿದೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

Find Out More:

Related Articles: