ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಜಾರಿಗೆ ತಂದ ಯೋಜನೆ ಯಾವುದು ಗೊತ್ತಾ..?
ಕೊರೋನಾ ವೈರಸ್ ಇಂದಾಗಿ ದೇಶವೇ ಲಾಕ್ ಡೌನ್ ಆದ ಹಿನ್ನಲ್ಲೆಯಲ್ಲಿ ಸಾಕಷ್ಟು ಕಾರ್ಖಾನೆಗಳನ್ನು ತನ್ನ ಬಾಗಿಲನ್ನು ಬಂದ್ ಮಾಡಲಾಗಿತ್ತು ಇದರಿಂದಾಗಿ ಕಾರ್ಖಾನೆಗಲ್ಲಿ ಕೆಲಸವ್ನುಮಾಡುತ್ತಿದ್ದಂತಹ ಕಾರ್ಮಿಕರು ತಮ್ಮ ಕೆಲಸವನ್ನು ಕಳೆದುಕೊಂಡರು ಇದರಿಂದ ಅನೇಕ ಕಾರ್ಮಿಕರು ಸಾಕಷ್ಟು ಸಮಸ್ಯೆಯನ್ನು ಎದುರಿಸುವಂತಾಯಿತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅಷ್ಟಕ್ಕೂ ಆ ಯೋಜನೆ ಯಾವುದು ಗೊತ್ತಾ..?
ಕೋವಿಡ್ 19 ಸಂಬಂಧಿತ ಲಾಕ್ ಡೌನ್ ಕಾರಣದಿಂದ ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸಿದೆ.ಈ ಉದ್ದೇಶಕ್ಕಾಗಿ 'ಆತ್ಮ ನಿರ್ಭರ ಭಾರತ ಅಬಿಯಾನ'ದಡಿಯಲ್ಲಿ ಘೋಷಿತ ಆರ್ಥಿಕ ಪ್ಯಾಕೇಜ್ ನಲ್ಲಿ ಪ್ರಕಟಿಸಲಾಗಿದ್ದ 50 ಸಾವಿರ ಕೋಟಿ ರೂಪಾಯಿಳ ಬೃಹತ್ 'ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆ'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.
ಲಾಕ್ ಡೌನ್ ಕಾರಣದಿಂದ ತಮ್ಮ ಸ್ವಗ್ರಾಮಗಳಿಗೆ ಹಿಂತಿರುಗಿರುವ ಲಕ್ಷಾಂತರ ವಲಸೆ ಕಾರ್ಮಿಕರಿಗೆ ಉದ್ಯೋಗವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಈ ಯೊಜನೆ ಸಹಕಾರಿಯಾಗಲಿದೆ.ಪ್ರಧಾನ ಮಂತ್ರಿಯವರು ವರ್ಚ್ಯುವಲ್ ಸಭೆಯ ಮೂಲಕ ಇಂದು ಈ ಯೋಜನೆಗೆ ಚಾಲನೆ ನೀಡಿದರು. ಇದರ ಮೂಲಕ ಆರು ರಾಜ್ಯಗಳ 116 ಜಿಲ್ಲೆಗಳಲ್ಲಿ ಈ ಯೋಜನೆ ಮುಂದಿನ 125 ದಿನಗಳ ಕಾಲ ಒಂದು ಅಭಿಯಾನದ ರೂಪದಲ್ಲಿ ಕಾರ್ಯಾಚರಿಸಲಿದೆ.
ಬಿಹಾರದ ಖಗಾರಿಯಾ ಜಿಲ್ಲೆಯ ತೆಲಿಹಾರ್ ಗ್ರಾಮದಿಂದ ಈ ಯೋಜನೆ ಪ್ರಾರಂಭಗೊಂಡಿದ್ದು, ಬಿಹಾರ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಜಾರ್ಖಂಡ್ ಹಾಗೂ ಒಡಿಸ್ಸಾ ರಾಜ್ಯಗಳ 116 ಜಿಲ್ಲೆಗಳನ್ನು ಈ ಯೋಜನೆ ಒಳಗೊಳ್ಳಲಿದೆ.
'ನಿಮ್ಮ ಭಾವನೆ ಹಾಗೂ ಅವಶ್ಯಕತೆಗಳನ್ನು ಈ ದೇಶವು ಅರ್ಥಮಾಡಿಕೊಳ್ಳುತ್ತದೆ. ಮತ್ತು ಈ ಅವಶ್ಯಕತೆ ಹಾಗೂ ಭಾವನೆಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನ ಇದೀಗ ಬಿಹಾರದ ಖಗಾರಿಯಾ ಜಿಲ್ಲೆಯಿಂದ ಪ್ರಾರಂಭಗೊಳ್ಳುತ್ತಿದೆ' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಅಭಿಯಾನಕ್ಕೆ ಚಾಲನೆ ನೀಡುತ್ತಾ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಿಯವರು ವಿವಿಧ ರಾಜ್ಯಗಳಿಗೆ ವಲಸೆ ಹೋಗಿದ್ದು ಇದೀಗ ಲಾಕ್ ಡೌನ್ ಕಾರಣದಿಂದ ತಮ್ಮ ಸ್ವಂತ ರಾಜ್ಯ ಬಿಹಾರಕ್ಕೆ ವಾಪಾಸಾಗಿರುವ ಹಲವು ವಲಸೆ ಕಾರ್ಮಿಕರೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಲ್ಲೇ ಮಾತನಾಡಿದರು.
ಈ ಲಾಕ್ ಡೌನ್ ಬಳಿಕ ಸುಮಾರು 30 ಲಕ್ಷಕ್ಕೂ ಅಧಿಕ ಬಿಹಾರ ರಾಜ್ಯದ ವಲಸೆ ಕಾರ್ಮಿಕರು ತಮ್ಮ ರಾಜ್ಯಕ್ಕೆ ವಾಪಾಸಾಗಿದ್ದರು.
ಈ ಯೋಜನೆಯ ಉದ್ಘಾಟನೆಯ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹಿತ ಹಲವರು ಉಪಸ್ಥಿತರಿದ್ದರು.