ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವುದಾ..? ಇಲ್ಲಿದೆ ಉತ್ತರ

Soma shekhar

ಕೊರೋನಾ ವೈರಸ್ ಅನ್ನು  ತಡೆಯುವ  ಉದ್ದೇಶದಿಂದ ಎರಡು ತಿಂಗಳ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು, ಇದಾದ ನಂತರ ಎದುರಾದ ಆರ್ಥಿಕ ಸಮಸ್ಯೆ ಇಂದಾಗಿ ಲಾಕ್ ಡೌನ್ ಅನ್ನು ತೆರವು ಗೊಳಿಸಿ ಕೊರೋನಾ ವೈರಸ್ ಇದ್ದ ಕಡೆ ಮಾತ್ರ ಲಾಕ್ ಡೌನ್ ಮಾಡುವಂತೆ ಸೂಚಿಸಲಾಗಿತ್ತು. ಆದರೆ ಇಂದು ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದಾಗಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಇದನ್ನು ತಡೆಯ ಬೇಕೆಂದರೆ ಮತ್ತೆ ಲಾಕ್ ಡೌನ್ ಮಾಡಬೇಕು ಎಂಬ ಸಲಹೆಗಳನ್ನು ಹಲವು ರಾಜಕೀಯ ನಾಯಕರು ನೀಡುತ್ತಿದ್ದಾರೆ. ಈ ಬಗ್ಗೆ ಚಿಂತನೆಯನ್ನು ನಡೆಸುತ್ತಿದೆ.

 

ಹೌದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ಹಾಗೂ ಸಾವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಿಸಲಾಗಿದ್ದ ಲಾಕ್‍ಡೌನ್ ನಿಬಂಧನೆಗಳನ್ನು ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ.

 

ರಾಜಧಾನಿ ಬೆಂಗಳೂರು, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ನಿಬಂಧನೆಗಳನ್ನು ಪುನಃ ವಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಂತಿಸಿದ್ದಾರೆ.

ಈ ಸಂಬಂಧ ನಿನ್ನೆ ಹಿರಿಯ ಸಚಿವರ ಜತೆ ಸಭೆ ನಡೆಸಿದಾಗ ರಾಜ್ಯದಲ್ಲಿ ಪುನಃ ಲಾಕ್‍ಡೌನ್ ವಿಸುವ ಬಗ್ಗೆ ಸಲಹೆಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಅಕಾರಿಗಳು ಕೂಡ ಇದಕ್ಕೆ ಬೆಂಬಲ ಸೂಚಿಸಿದ್ದು, ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಕಡೆ ಲಾಕ್‍ಡೌನ್ ಜಾರಿ ಮಾಡಬೇಕಾದ ಅಗತ್ಯವಿದೆ ಎಂದು ಸಲಹೆ ಕೊಟ್ಟಿದ್ದಾರೆ.

 

ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತೊಂದು ಸುತ್ತು ಸಚಿವರಿಂದ ಸಭೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ. ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಒಂದು ಸಾವಿರಕ್ಕೂ ಅಕ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

 

ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ 150, 200 ಹೀಗೆ ಏರುತ್ತಲೇ ಇದೆ. ಜತೆಗೆ ಸಾವಿನ ಪ್ರಮಾಣವೂ ಕೂಡ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಐದು ವಾರ್ಡ್‍ಗಳ ಪ್ರಮುಖ ಬೀದಿಗಳಲ್ಲಿ ಸೀಲ್‍ಡೌನ್ ಮಾಡಲಾಗಿದೆ. ಇಲ್ಲಿಯ ನಿಯಮವನ್ನೇ ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಿಗೂ ಅಳವಡಿಸಿಕೊಳ್ಳುವಂತೆ ಸರ್ಕಾರ ಅಲ್ಲಿನ ಜಿಲ್ಲಾಕಾರಿಗಳಿಗೆ ಸೂಚನೆ ಕೊಟ್ಟಿದೆ.

 

ಇದೀಗ ಸೋಂಕು ಪ್ರಮಾಣ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‍ಡೌನ್ ವಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲ ಚಟುವಟಿಕೆಗಳಿಗೆ ಮತ್ತೆ ನಿರ್ಬಂಧ ವಿಸುವ ಸಾಧ್ಯತೆ ಹೆಚ್ಚಾಗಿದೆ. ಸೋಂಕಿನ ಪ್ರಕರಣ ಹೆಚ್ಚಿರುವ ಬೆಂಗಳೂರಿನ ಕೆಲವು ವಾರ್ಡ್‍ಗಳು, ಕಲಬುರಗಿ, ರಾಯಚೂರು, ಬಳ್ಳಾರಿ, ಬೀದರ್, ವಿಜಯಪುರ, ಯಾದಗಿರಿ, ಕೊಪ್ಪಳ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮತ್ತೆ ಜಾರಿಯಾದರೂ ಅಚ್ಚರಿ ಇಲ್ಲ.

ಈ ಹಿಂದೆ ರಾಜ್ಯದಲ್ಲಿ ನಾಲ್ಕು ಬಾರಿ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿತ್ತು. ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗಿದ್ದರಿಂದ ಹಂತ ಹಂತವಾಗಿ ಲಾಕ್‍ಡೌನ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು.

 

ಯಾವಾಗ ಸಂಪೂರ್ಣವಾಗಿ ಅನ್‍ಲಾಕ್‍ಡೌನ್ ಜಾರಿಯಾಯಿತೋ ಎಲ್ಲ ಚಟುವಟಿಕೆಗಳೂ ಪ್ರಾರಂಭವಾದವು. ಹೊರರಾಜ್ಯದಿಂದ ಬಂದವರಿಂದಾಗಿ ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಏರುತ್ತಲೇ ಇದೆ ಕರ್ನಾಟಕದಲ್ಲಿ ಸೋಂಕು ಹಬ್ಬದಂತೆ ತಡೆಗಟ್ಟಲು ಅಲ್ಲಿನ ಸರ್ಕಾರ ಅಳವಡಿಸಿಕೊಂಡಿರುವ ತಂತ್ರಜ್ಞಾನವನ್ನು ಇತರೆ ರಾಜ್ಯಗಳೂ ಅಳವಡಿಸಿಕೊಳ್ಳಬೇಕೆಂದು ನಾಲ್ಕು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿತ್ತು. ಇದೀಗ ಕರ್ನಾಟಕದಲ್ಲೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಸಾರ್ವಜನಿಕರಲ್ಲಿ ತಲ್ಲಣ ಸೃಷ್ಟಿಸಿದೆ.

 

Find Out More:

Related Articles: