ಭಾರತದಲ್ಲಿ ಕಳೆದ 24ಗಂಟೆಯಲ್ಲಿ ದಾಖಲಾದ ಕೊರೋನಾ ಸೋಂಕಿತ ಪ್ರಕರಣಗಳು ಎಷ್ಟು ಗೊತ್ತಾ..?

Soma shekhar

ಕಿಲ್ಲರ್ ಕೋವಿಡ್ ವೈರಸ್ ಗಂಡಾಂತರದಿಂದ ತತ್ತರಿಸುತ್ತಿರುವ ಭಾರತದಲ್ಲಿ ಪಿಡುಗಿನ ಕರ್ಮಕಾಂಢ ಯಥಾಪ್ರಕಾರ ಮುಂದುವರಿದಿದೆ. ದಿನೇ ದಿನೇ ಸೋಂಕು ಮತ್ತು ಸಾವು ಪ್ರಕರಣಗಳು ಅತಿ ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ದೇಶವಾಸಿಗಳು ಹೆದರಿ ಕಂಗಲಾಗಿದ್ದಾರೆ. ಅಷ್ಟಕ್ಕೂ ಇಡೀ ದೇಶದಲ್ಲಿ ದಾಖಲಾದ ಕೊರೋನಾ ಸೋಂಕಿತ ಪ್ರಕರಣಗಳು ಎಷ್ಟು ಗೊತ್ತಾ..?

 

24 ತಾಸುಗಳಲ್ಲಿ ಕೋವಿಡ್ ವೈರಾಣು ದಾಳಿಯ ಹೊಸ ದಾಖಲೆ ನಿರ್ಮಾಣವಾಗಿದ್ದು, 45,720 ಹೊಸ ಸಾಂಕ್ರಾಮಿಕ ರೋಗ ಪ್ರಕರಣಗಳು ವರದಿಯಾಗಿದೆ. ಒಂದೇ ದಿನ 1,129 ಸಾವುಗಳು ಸಂಭವಿಸಿದೆ.ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 12.40 ಲಕ್ಷ ಹಾಗೂ ಸಾವಿನ ಪ್ರಮಾಣ 30,000 ದಾಟಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ.

 

ದೇಶದಲ್ಲಿ 4.27 ಲಕ್ಷ ಆಕ್ಟಿವ್ ಕೇಸ್‍ಗಳಿದ್ದು, 7.83 ಲಕ್ಷ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿ ಡಿಸ್ರ್ಚಾಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ನಿನ್ನೆವರೆಗೆ ಒಂದೂವರೆ ಕೋಟಿಗೂ ಅಧಿಕ ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ದೇಶದಲ್ಲಿ ಜುಲೈ ತಿಂಗಳ 23 ದಿನವೂ ಹೆಮ್ಮಾರಿ ಆರ್ಭಟ ಅತಂಕಕಾರಿ ಮಟ್ಟದಲ್ಲೇ ಮುಂದುವರಿದಿದ್ದು, ಇನ್ನೆರಡು ತಿಂಗಳು ಭಾರತಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಈ ಪೀಡೆಯ ಹಾವಳಿ ಈ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯರ ಮತ್ತಷ್ಟು ಹೆದರಿ ಕಂಗಲಾಗಿದ್ದಾರೆ. ಮುಂದೇನು ಎಂಬ ಭಯ ಎಲ್ಲರಲ್ಲೂ ಮನೆ ಮಾಡಿದೆ.

 

ನಿನ್ನೆ ಒಂದೇ ದಿನ (24 ಗಂಟೆಗಳ ಅವಧಿ) 45,720 ಪಾಸಿಟಿವ್ ಕೇಸ್‍ಗಳು ದಾಖಲಾಗಿವೆ. ಸತತ 20 ದಿನಗಳಿಂದ ದೇಶದಲ್ಲಿ 20,000ಕ್ಕೂ ಹೆಚ್ಚು ಸಾಂಕ್ರಾಮಿಕ ರೋಗಗಳು ಪತ್ತೆಯಾಗಿರುವುದು ಆಘಾತಕಾರಿಯಾಗಿದೆ.
ನಾಳೆ ವೇಳೆಗೆ ದೇಶದಲ್ಲಿ ಸಾವಿನ ಪ್ರಮಾಣ ಸುಮಾರು 32,000 ಮತ್ತು ಸೋಂಕು ಬಾಧಿತರ ಸಂಖ್ಯೆ 12.41 ಲಕ್ಷ ತಲುಪುವ ಆತಂಕವಿದೆ. ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 1,129 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತರ ಸಂಖ್ಯೆ 29,861ಕ್ಕೇರಿದೆ. ಭಾರತದಲ್ಲಿ. ಸೋಂಕು ಪೀಡಿತರ ಸಂಖ್ಯೆ 12,38,635 ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

 

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ 24 ತಾಸುಗಳಲ್ಲಿ ಚೇತರಿಕೆ ಪ್ರಮಾಣದಲ್ಲಿ ಶೇ.63.18ರಷ್ಟು ಏರಿಕೆ ಕಂಡುಬಂದಿದ್ದು, ಸುಮಾರು 7.83 ಲಕ್ಷ ರೋಗಿಗಳು ಗುಣಮುಖರಾಗಿರುವುದು ಸಮಾಧಾನಕಾರ ಸಂಗತಿ.

 

Find Out More:

Related Articles: