ಟ್ರಂಪ್ ಜೊತೆಗೆ ಭಾರತಕ್ಕೆ ಬರುತ್ತಿರೋ  ಕಾರಿನ ವಿಶೇಷತೆಗಳೇನು ಗೊತ್ತಾ!?

Soma shekhar
ನವದೆಹಲಿ: ವಿಶ್ವದ ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಜರಾತ್‍ ಗೆ ಇದೇ 24ರಂದು ಆಗಮಿಸಲಿದ್ದಾರೆ. ಬಳಿಕ ಅವರು ತಮ್ಮ ‘ದಿ ಬೀಸ್ಟ್’ ಕಾರಿನಲ್ಲಿ ಅಹಮದಾಬಾದ್‍ ನ ಸರ್ದಾರ್ ಪಟೇಲ್ ಸ್ಟೇಡಿಯಂಗೆ ತೆರಳಲಿದ್ದಾರೆ. ಭದ್ರತೆ ದೃಷ್ಟಿಯಿಂದ ಟ್ರಂಪ್ ಆಗಮನಕ್ಕೂ ಮುನ್ನವೇ ದಿ ಬೀಸ್ಟ್ ಕಾರು ಗುಜರಾತ್ ಸೇರಿದೆ. ಈ ಕಾರಿನ ವಿಶೇಷತೆಗಳೇನು ಅಂತ ಕೇಳಿದ್ರೆ ನೀವ್ ಕೂಡ ಶಾಕ್ ಆಗ್ತೀರಾ. ಹೌದು, ಅದೇನೆಂದು ಇಲ್ಲಿದೆ ನೋಡಿ. 
 
ಡೊನಾಲ್ಡ್ ಟ್ರಂಪ್ ಅವರು ವಿಶೇಷ ವಿಮಾನ ಏರ್‍ ಫೋರ್ಸ್ 1 ಫೆಬ್ರವರಿ 24ರಂದು ಬೆಳಗ್ಗೆ 11.55 ಕ್ಕೆ ಅಹಮದಾಬಾದ್‍ ನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಅದೇ ಸಮಯಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ರಂಪ್ ದಂಪತಿಯನ್ನು ಸ್ವಾಗತಿಸಲಿದ್ದಾರೆ. ಅಲ್ಲಿಂದ ಟ್ರಂಪ್ ಮತ್ತು ಮೋದಿ ಸಬರಮತಿ ಆಶ್ರಮಕ್ಕೆ ತೆರಳಲಿದ್ದು, 25 ನಿಮಿಷಗಳ ಕಾಲ ಅಲ್ಲಿಯೇ ಇರಲಿದ್ದಾರೆ.
 
ಉಭಯ ನಾಯಕರು ‘ಇಂಡಿಯಾ ರೋಡ್ ಶೋ’ ಪ್ರದರ್ಶನ ನೀಡಿ ಮಧ್ಯಾಹ್ನ 1:15ಕ್ಕೆ ಮೊಟೆರಾ ಕ್ರೀಡಾಂಗಣ ತಲುಪಲಿದ್ದಾರೆ.ಮೊಟೆರಾ ಕ್ರೀಡಾಂಗಣದಲ್ಲಿ ಟ್ರಂಪ್ ಮತ್ತು ಮೋದಿಯವರ ‘ನಮಸ್ತೆ ಟ್ರಂಪ್’ ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಅವರು ಸುಮಾರು 150 ನಿಮಿಷಗಳ ಕಾಲ ಅಹಮದಾಬಾದ್‍ ನಲ್ಲಿ ಇರಲಿದ್ದಾರೆ. ಇದರ ನಂತರ ಉಭಯ ನಾಯಕರು ಮಧ್ಯಾಹ್ನ 3:30ಕ್ಕೆ ದೆಹಲಿಗೆ ತೆರಳಲಿದ್ದಾರೆ. 
 
ಈಗಾಗಲೇ ಅಮೆರಿಕ ವಾಯುಪಡೆಯ ಸರಕು ವಿಮಾನ ಹಕ್ರ್ಯುಲಸ್ ಭಾನುವಾರ ಬೆಳಗ್ಗೆ ಅಹಮದಾಬಾದ್‍ ಗೆ ಆಗಮಿಸಿದೆ. ಇದು ಟ್ರಂಪ್ ಅವರ ಭದ್ರತಾ ಕಾರು, ಸ್ನೈಪರ್ ಗಳು, ಪತ್ತೇದಾರಿ ಕ್ಯಾಮೆರಾಗಳು ಮತ್ತು ಅಗ್ನಿ ಸುರಕ್ಷತಾ ವ್ಯವಸ್ಥೆಗಳನ್ನು ಹೊತ್ತು ತಂದಿವೆ. ಹೈಟೆಕ್ ಸುರಕ್ಷತಾ ಸಾಧನಗಳನ್ನು ಸಹ ಪರಿಚಯಿಸಲಾಗಿದೆ. ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಅಮೆರಿಕ ತಂಡ ಭಾನುವಾರ ಸ್ಥಳೀಯ ಅಧಿಕಾರಿಗಳನ್ನು ಭೇಟಿ ಮಾಡಿತ್ತು. ಅಧ್ಯಕ್ಷ ಟ್ರಂಪ್ ಅವರ ಭದ್ರತೆಗೆ 65ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 200ಇನ್ಸ್ ಪೆಕ್ಟರ್‍ಗಳು, 800 ಸಬ್ ಇನ್ಸ್ ಪೆಕ್ಟರ್‍ ಗಳು ಮತ್ತು 12,000 ನಗರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂಬುದು ತಿಳಿದುಬಂದಿದೆ.

Find Out More:

Related Articles: