ಮಂಕಾದ ಆಟದಿಂದ ಎರಡನೇ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ

Soma shekhar
ದುಬೈ: ಚೇಸಿಂಗ್ ಕಿಂಗ್, ದಾಖಲೆಗಳ ಸರದಾರ, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬ್ಯಾಟ್ಸ್‌ ಮನ್‌ ಗಳ ಟೆಸ್ಟ್ ಶ್ರೇಯಾಂಕದಲ್ಲಿ ಸಾಧಾರಣ ಆಟದಿಂದ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಬುಮ್ರಾ ಟಾಪ್ 10 ಪಟ್ಟಿಯಿಂದಲೇ ಹೊರಬಿದ್ದಿದ್ದು ಶಾಕ್ ನೀಡಿದೆ. ಈ ಕುರಿತಾದ ವಿವರವಾದ ಐಸಿಸಿ ಟೆಸ್ಟ್ ರಾಂಕಿಂಗ್ ವರದಿ ಇಲ್ಲಿದೆ ನೋಡಿ.
 
ಭಾರತ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಟೆಸ್ಟ್ ರಾಂಕಿಂಗ್ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್‌ ಮನ್‌ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದು ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸ್ಟೀವನ್ ಸ್ಮಿತ್ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಟಾಪ್ 10 ಪಟ್ಟಿಯಿಂದ ಹೊರಬಿದ್ದಿದ್ದು ಶಾಕ್ ಆಗಿದೆ. 
 
ಹೌದು, ನ್ಯೂಜಿಲೆಂಡ ವಿರುದ್ಧ ವಿರಾಟ್ ಕೊಹ್ಲಿ ಕೇವಲ(2&19) 21 ರನ್‌ ಗಳನ್ನು ಬಾರಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 5 ರೇಟಿಂಗ್ ಅಂಕ ಕುಸಿದಿದ್ದಾರೆ. ಇದೀಗ ಕೊಹ್ಲಿ 906 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇನ್ನು ಸ್ಟೀವ್ ಸ್ಮಿತ್ 5 ಅಂಕ ಮೇಲೇರಿ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಅಜಿಂಕ್ಯ ರಹಾನೆ(760), ಚೇತೇಶ್ವರ್ ಪೂಜಾರ(757) ಹಾಗೂ ಮಯಾಂಕ್ ಅಗರ್‌ವಾಲ್(727) ಕ್ರಮವಾಗಿ 8,9 ಹಾಗೂ 10ನೇ ಸ್ಥಾನದಲ್ಲಿದ್ದಾರೆ. 
 
ಇನ್ನುಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ಕೇನ್ ವಿಲಿಯಮ್ಸನ್ ಒಂದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬೌಲರ್‌ ಗಳ ವಿಭಾಗದಲ್ಲಿ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ಟಾಪ್ 5 ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು ಭಾರತ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿ ಮಿಂಚಿದ್ದ  ಟಿಮ್ ಸೌಥಿ 8 ಸ್ಥಾನ ಮೇಲೇರಿ 6ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಅಶ್ವಿನ್ ಒಂದು ಸ್ಥಾನ ಕುಸಿದು 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಅಶ್ವಿನ್ ಬೌಲಿಂಗ್ ವಿಭಾಗದಲ್ಲಿ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಬೌಲರ್ ಎನಿಸಿದ್ದಾರೆ.

Find Out More:

Related Articles: