ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕ್ರಿಕೆಟ್ ದಿಗ್ಗಜರಿಬ್ಬರಿಂದ ನಿವೃತ್ತಿ ಘೋಷಣೆ..!!

Soma shekhar
ಅಂತರಾಷ್ಟ್ರೀಯ ಕ್ರಿಕೆಟ್ ನ ಭಾರತ ತಂಡದಲ್ಲಿ ಕೂಲ್ ಕ್ಯಾಪಟ್ ಎಂದೇ ಹೆಸರನ್ನು ಪಡೆದಿದ್ದ ಮಹೇಂದ್ರ ಸಿಂಗ್ ದೋನಿ ತನ್ನ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅದೇ ರೀತಿ ಧೋನಿಯ ನಿವೃತ್ತಿ ಘೋಷಣೆಯಾಗುತ್ತಿದ್ದಂತೆ ಮತ್ತೊಬ್ಬ ಭಾರತ ತಂಡದ ಕ್ರಿಕೆಟ್ ಆಟಗಾರ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ.


ಹೌದು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಈ ಕುರಿತು ಧೋನಿ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಇದೇ ವೇಳೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.


ಭಾರತೀಯ ಕ್ರಿಕೆಟ್ ತಂಡದ ನಾಯಕರಾಗಿ ಇವರು ಎರಡು ಬಾರಿ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರೂ ಮುಂದಿನ ಐಪಿಎಲ್ ನಲ್ಲಿ ಆಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.


2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು. ಮಾತ್ರವಲ್ಲದೆ ಯಶಸ್ವಿ ನಾಯಕರಾಗಿ ಮತ್ತು ವಿಕೇಟ್ ಕೀಪರ್ ಆಗಿ ತಂಡದಲ್ಲಿ ಗುರುತಿಸಿಕೊಂಡಿದ್ದರು.


ಮಹೆಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಚ್ ವಿನ್ನರ್ ಎಂದೇ ಹೆಸರಾಗಿದ್ದ ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ಹಾಗೂ ಟಿ20 ಕ್ರಿಕೇಟ್ ನಲ್ಲಿ ರೈನಾ ತಮ್ಮದೇ ಆದ ಛಾಪು ಮೂಡಿಸಿದ್ದರು. ಮಾತ್ರವಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಬಂದು ಸ್ಪೋಟಕ ಆಟವಾಡಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದರು.


ರೈನಾ 1999ರಲ್ಲಿ ಕ್ರಿಕೆಟ್ ವೃತ್ತಿಜೀವನ ಆರಂಭಿಸಿದ್ದರು. 2003ಲ್ಲಿ ಉತ್ತರಪ್ರದೇಶ ರಣಜಿ ಟ್ರೋಫಿ ಗೆಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2005ರಲ್ಲಿ ಭಾರತೀಯ ಕ್ರಿಕಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಇದುವರೆಗೂ ಕ್ರಿಕೆಟ್ ನ ಎಲ್ಲಾ ಸ್ವರೂಪದ ಆಟಗಳಲ್ಲಿ ಶತಕ ಬಾರಿಸಿದ ಭಾರತದ ಏಕೈಕ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.


ಸುರೇಶ್ ರೈನಾ 226 ಏಕದಿನ ಪಂದ್ಯಗಳನ್ನು ಆಡಿದ್ದು 5,615 ರನ್ ಬಾರಿಸಿದ್ದಾರೆ. ಇನ್ನು 78 ಟಿ20 ಪಂದ್ಯಗಳಲ್ಲಿ 1,605 ರನ್ ಬಾರಿಸಿದ್ದಾರೆ. 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 768 ರನ್ ಬಾರಿಸಿದ್ದಾರೆ.

Find Out More:

Related Articles: